ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟ ಸರ್ಕಾರದ ಕ್ರಮ ಖಂಡನೀಯ: ಶಾಸಕ ಸುನಿಲ್ ಕುಮಾರ್ – vishwanews24

Featured, ಉಡುಪಿ

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟ ಸರ್ಕಾರದ ಕ್ರಮ ಖಂಡನೀಯ: ಶಾಸಕ ಸುನಿಲ್ ಕುಮಾರ್

ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಸಂದರ್ಭದಲ್ಲಿ ಉಡುಪಿಯ ಆದರ್ಶ ಆಸ್ಪತ್ರೆಯ ಮುಖ್ಯಸ್ಥ ಡಾ. ಚಂದ್ರಶೇಖರ್ ಅವರ ಹೆಸರನ್ನು ಮೊದಲ ಪಟ್ಟಿಯಲ್ಲಿ ಘೋಷಿಸಿ, ಬಳಿಕ ಕೈಬಿಟ್ಟು ಮತ್ತೊಬ್ಬರನ್ನು ಆಯ್ಕೆ ಮಾಡಿರುವ ಕ್ರಮ ತೀವ್ರ ಖಂಡನೀಯ ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ವೈದ್ಯಕೀಯ ಕ್ಷೇತ್ರದ ಜತೆಗೆ ಹಲವು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಡಾ. ಚಂದ್ರಶೇಖರ್ ಅವರು ಸದಾ ಜನರ ಧ್ವನಿಯಾಗಿ, ಸಮಾಜದ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ.

ಉಡುಪಿ : ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕನ ಸಾವು ಪ್ರಕರಣ : ಹಲ್ಲೆ, ಬೆದರಿಕೆ ಹಿನ್ನೆಲೆ ಆತ್ಮಹತ್ಯೆ ಪ್ರಚೋದನೆ ಆರೋಪ !vishwanews24

ಇಂತಹ ಗೌರವಾನ್ವಿತ ವ್ಯಕ್ತಿತ್ವದ ಸೇವೆಯನ್ನು ಕಡೆಗಣಿಸಿರುವುದು ಅತ್ಯಂತ ನೋವಿನ ಸಂಗತಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಈ ನಡೆ ಡಾ. ಚಂದ್ರಶೇಖರ್ ಅವರಂತಹ ವ್ಯಕ್ತಿತ್ವಕ್ಕೆ ಅಪಮಾನ ಮಾಡಿದಂತಾಗಿದೆ. ಸರ್ಕಾರದ ಈ ಕ್ರಮದ ವಿರುದ್ಧ ತೀವ್ರ ಆಕ್ರೋಶ ಹಾಗೂ ಉಗ್ರ ಖಂಡನೆ ವ್ಯಕ್ತಪಡಿಸುವುದಾಗಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಎಸ್‌ಐಟಿಯಿಂದ ಸೌಜನ್ಯ ಪ್ರಕರಣದ ಮರುತನಿಖೆ ಆರಂಭ : ಮೃತದೇಹ ಪತ್ತೆಯಾದ ಜಾಗಕ್ಕೆ ಭೇಟಿ – vishwanews24

Leave a Reply