ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ಮಹಿಳೆಯರಿಗೆ ಭದ್ರತೆ ಇಲ್ಲದಂತೆ ಆಗಿದೆ. ಕಾಲೇಜು ಅಥವಾ ಕೆಲಸಕ್ಕೆ ಹೋದ ಹೆಣ್ಣುಮಕ್ಕಳು ಸುರಕ್ಷಿತವಾಗಿ ಮನೆಗೆ ಬರಲಿಯೆಂದು ಹೆತ್ತವರು ದೇವರಲ್ಲಿ ಪ್ರಾರ್ಥಿಸುವ ಪರಿಸ್ಥಿತಿ ನಿರ್ಮಾಣ ಆಗಿದೆ.
ಉತ್ತರ ಕರ್ನಾಟಕ ಭಾಗದಲ್ಲಿ ಬಾಣಂತಿಯರ ಹಾಗೂ ನವಜಾತ ಶಿಶುಗಳ ಸರಣಿ ಸಾವು ಆಗುತ್ತಿದ್ದು, ಇದರ ನಿಯಂತ್ರಣಕ್ಕೆ ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರಕಾರ ಮೃತಪಟ್ಟ ಬಾಣಂತಿಯ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ಅನಾಥವಾಗಿರುವ ಮಕ್ಕಳನ್ನು ಸರಕಾರ ದತ್ತು ಪಡೆದು, ಅವರಿಗೆ ಶೈಕ್ಷಣಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು.
ಸರಕಾರಿ ಆಸ್ಪತ್ರೆಗಳಲ್ಲಿ ನುರಿತ ವೈದ್ಯರನ್ನು ನೇಮಿಸಿ ಗರ್ಭಿಣಿಯರು ಸುರಕ್ಷಿತವಾಗಿ ಹೆರಿಗೆ ಮಾಡುವಂತಾಗಬೇಕು. ಅಲ್ಲದೆ, ಬಾಣಂತಿಯರ ಸಾವಿನ ಪ್ರಕರಣದ ಉನ್ನತಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…