ಉಡುಪಿ : 30 ಲಕ್ಷ ರೂ. ವರೆಗಿನ ಅಭಿವೃದ್ಧಿ ಕೆಲಸಗಳಿಗೆ 1. ಕೋಟಿ ವರೆಗಿನ ಅಂದಾಜು ಪಟ್ಟಿ ತೋರಿಸಿ ಲೂಟಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಆರೋಪಿಸಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ಮಾಹಿತಿ ನೀಡಿದ ಅವರು, ವಿಧಾನಸಭೆ ಚುನಾವಣೆಗೆ ಎರಡು ತಿಂಗಳು ಬಾಕಿಯಿದ್ದು, ರಾಜ್ಯ ಬಿಜೆಪಿ ಸರಕಾರ ಚುನಾವಣೆಯಲ್ಲಿ ಮತ ಗಳಿಸುವ ಎಟಿಎಂ ಮಿಷನ್ ತರ ಕೆಲಸ ಕಾರ್ಯಗಳನ್ನು ಮಾಡುತ್ತಿದೆ. ದಿನಕ್ಕೊಂದು ಘೋಷಣೆ ಮಾಡುತ್ತಿದೆ. ಚುನಾವಣೆಯ ಹೊಸ್ತಿಲಿನಲ್ಲಿ ಘೋಷಣೆ ಮಾಡುವ ಯೋಜನೆಗಳಿಂದ ಯಾವುದೇ ಪ್ರಯೋಜನವಿಲ್ಲ ಎಂದರು ಹಾಗೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೆಚ್ಚುವರಿ ಅಂದಾಜುಪಟ್ಟಿ ತೋರಿಸಿ ಮಾಡಿರುವ ಕೆಲಸಗಳ ಸಂಬಂದಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿ ಯಾವ ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಭ್ರಷ್ಟಾಚಾರ ನಡೆದಿದೆ ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಹಾಗೂ ಗಣರಾಜ್ಯೋತ್ಸವ ಸಂದರ್ಭದಲ್ಲಿ ನಾರಾಯಣ ಗುರು ಅವರ ಸ್ತಬ್ದ ಚಿತ್ರಕ್ಕೆ ನಿರಾಕರಿಸಿದಾಗ ಅದನ್ನು ಖಂಡಿಸಿ ಈ ಬಗ್ಗೆ ಕೇಂದ್ರ ಸರಕಾರಕ್ಕೆ ಒತ್ತಡ ತರುವ ಕೆಲಸವಾದರೂ ಸರಕಾರ ಮಾಡಬಹುದಿತ್ತು. ಪಠ್ಯ ಪುಸ್ತಕದಿಂದ ಮಹಾನಿಯರ ಪಠ್ಯವನ್ನು ತೆಗೆದು ಹಾಕಿವುದು ಸರಕಾರಕ್ಕೆ ಮಹಾತ್ಮ ಗಾಂಧೀಜಿ, ಬಸವಣ್ಣ, ಕುವೆಂಪು, ಅಂಬೇಡ್ಕರ್ ಅವರ ಬಗ್ಗೆ ತಿರಸ್ಕಾರದ ಭಾವ ಇರುವುದು ಎತ್ತಿ ತೋರಿಸುತ್ತಿದೆ. ಆದರೆ ಇದೀಗ ಮುಂದಿನ ಚುನಾವಣೆಯಲ್ಲಿ ಬಿಲ್ಲವ ಮತ ಗಳಿಸಲು ನಿಗಮ ರಚಿಸಲು ಸರಕಾರ ಹೊರಟಿದೆ. ಬಿಲ್ಲವ ಸಮುದಾಯದ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸರಕಾರವು ಬಿಲ್ಲವ ಮತಗಳಿಸಲು ನಿಗಮದ ಘೋಷಣೆ ಮಾಡಲು ಹೊರಟಿದೆ. ಆದರೆ ಕೇವಲ ನಿಗಮ ಘೋಷಣೆ ಮಾಡಿದ್ರೆ ಯಾವುದೇ ಪ್ರಯೋಜವಿಲ್ಲ. ಸ್ವ ಸಹಾಯ ಗುಂಪುಗಳ ಮಹಿಳಾ ಸದಸ್ಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಬೇಕೆಂಬ ಸಮುದಾಯದ ಬೇಡಿಕೆ ಇದೆ. ಅದಕ್ಕೆ ಅನುಗುಣವಾಗಿ ಅನುದಾನ ಮೀಸಲಿಡಬೇಕು. ಚುನಾವಣೆ ಹಿತದೃಷ್ಟಿಯಿಂದ ನಿಗಮ ಘೋಷಣೆಯಾದರೆ ಯಾವುದೇ ಪ್ರಯೋಜನವಿಲ್ಲ ಎಂದು ಕಿಡಿಕಾರಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…