Featured

ಉಡುಪಿ: ರಾಜ್ಯ ಸರಕಾರ ಕೂಡಲೇ ಲವ್ ಜೆಹಾದ್ ತಡೆ ಕಾನೂನು ಜಾರಿಗೆ ತರಬೇಕು : ಬಜರಂಗದಳ ಆಗ್ರಹ – Vishwanews24

ಉಡುಪಿ: ರಾಜ್ಯ ಸರಕಾರ ಕೂಡಲೇ ಲವ್ ಜೆಹಾದ್ ತಡೆ ಕಾನೂನು ಜಾರಿಗೆ ತರಬೇಕು : ಬಜರಂಗದಳ ಆಗ್ರಹ

ಉಡುಪಿ: ಹಿಂದೂ ಯುವತಿಯರು ಲವ್ ಜೆಹಾದ್‌ಗೆ ಸಿಲುಕಿ ಉಗ್ರ ಚಟುವಟಿಕೆಗೆ ತೊಡಗಿಸಿಕೊಂಡಿರುವ ಪ್ರಕರಣಗಳು ಕಣ್ಣ ಮುಂದೆಯೇ ನಡೆಯುತ್ತಿದ್ದು, ರಾಜ್ಯ ಸರಕಾರ ಕೂಡಲೆ ಲವ್ ಜೆಹಾದ್ ತಡೆ ಕಾನೂನು ಜಾರಿಗೆ ತರಬೇಕು ಎಂದು ಬಜರಂಗದಳ ರಾಜ್ಯ ದಕ್ಷಿಣ ಪ್ರಾಂತ ಸಂಯೋಜಕ ಸುನೀಲ್ ಕೆ. ಆರ್. ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ವ್ಯವಸ್ಥಿತ ಜಾಲ ವಾಗಿದ್ದು ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿ, ಪ್ರೇಮದ ಹೆಸರಿನಲ್ಲಿ ಮತಾಂತರಿಸಿ ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಮಂಗಳೂರಿನಲ್ಲಿ ಎನ್ ಐಎ ದಾಳಿ ಸಂದರ್ಭ ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವತಿ ದೀಪ್ತಿ ಮಾರ್ಲ ಉಗ್ರ ಚಟುವಟಿಕೆ ಆರೋಪದಲ್ಲಿ ಬಂಧಿತಳಾಗಿರುವುದು ಇದಕ್ಕೆ ಪುಷ್ಟಿ ನೀಡುತ್ತದೆ ಎಂದರು.

ಕರಾವಳಿ ಉಗ್ರರ ಪ್ರಯೋಗಶಾಲೆಯಾಗುತ್ತಿರುವುದು ಆತಂಕಕಾರಿ. ಉಳ್ಳಾಲದಲ್ಲಿ ಎನ್‌ಐಎ ಕಚೇರಿ ಸ್ಥಾಪನೆ ಆಗಬೇಕು ಎಂದು ಆಗ್ರಹಿಸಿದ ಅವರು ಶಾಲೆ-ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಗೌರವ ಕೊಡಬೇಕು. ಧರ್ಮ, ಧಾರ್ಮಿಕ ಸ್ವಾತಂತ್ರ್ಯ ಹೆಸರಲ್ಲಿ ಹಿಜಾಬ್ ಧರಿಸುವುದು ಶೋಭೆಯಲ್ಲ. ಎಲ್ಲರೂ ವಸ್ತ್ರ ಸಂಹಿತೆ ಪಾಲಿಸಬೇಕು ಎಂದರು. ಜಿಲ್ಲಾ ಸಂಯೋಜಕ ಸುರೇಂದ್ರ ಕೋಟೇಶ್ವರ, ಮಂಗಳೂರು ಸಂಯೋಜಕ ಪುನಿತ್ ಅತ್ತಾವರ, ಪುತ್ತೂರು ಸಂಯೋಜಕ ಭರತ್ ಕುಂಡೇಲ್ ಉಪಸ್ಥಿತರಿದ್ದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

12 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

12 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

12 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

12 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

12 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

13 hours ago