ಉಡುಪಿ: ಕೋವಿಡ್ ನ ರೂಪಾಂತರದ ಪ್ರಭಾವವನ್ನು ನಿಯಂತ್ರಿಸಲು ಸರಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಅದರಂತೆ ಡಿ. 24ರ ರಾತ್ರಿ 11ರಿಂದ ಜ.2ರ ಬೆಳಗ್ಗೆ 5ರ ವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಗ ಸೂಚಿಯಲ್ಲಿ ಸೂಚಿಸಿರುವ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ತುರ್ತು ಸೇವೆಗಳನ್ನು ಹೊರತು ಪಡಿಸಿ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಉಡುಪಿ ಜಿಲ್ಲಾಡಳಿತ ಹೇಳಿದೆ.
ಈ ಕುರಿತಂತೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಮಾಹಿತಿ ನೀಡಿ, ರಾತ್ರಿ ನಡೆಯುವ ಯಕ್ಷಗಾನ, ದೇವಸ್ಥಾನಗಳ ಉತ್ಸವಗಳು, ಮೆಹಂದಿಯಂತಹ ಕಾರ್ಯಕ್ರಮಗಳು, ಕೋಲಗಳಿಗೆ ನಿರ್ಬಂಧ ಹೇರಲಾಗಿದ್ದು. ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿಯವರು ನೀಡಿದ ನಿರ್ದೇಶನದಂತೆ ಗುರುವಾರ ರಾತ್ರಿಯಿಂದ ಕರ್ಫ್ಯೂ ಜಾರಿಗೊಳಿಸಲು ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು. ಇನ್ನು ಉಡುಪಿ ಜಿಲ್ಲೆಗೆ ಸಂಬಂಧಿಸಿ ಪ್ರತ್ಯೇಕ ಆದೇಶವನ್ನು ಇಂದು ಹೊರಡಿಸಲಾಗುವುದು ಎಂದ ಅವರು, ಈ ಹಿಂದೆ ಕರ್ಫ್ಯೂ ಇದ್ದಾಗ ಪತ್ರಿಕೆಗಳಿಗೆ ರಿಯಾಯಿತಿ ನೀಡಲಾಗಿತ್ತು. ಅದರಂತೆಯೇ ಈ ಬಾರಿಯೂ ಪತ್ರಿಕೆಗಳ ಸಾಗಾಟ ಮತ್ತು ವಿತರಣೆಗೆ ರಿಯಾಯಿತಿ ಇರಲಿದೆ. ಯಾವುದೇ ಸಾಮಾನು ಸರಂಜಾಮುಗಳ ಸಾಗಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…