Featured

ಉಡುಪಿ : ನೈಟ್ ಕರ್ಫ್ಯೂ ; ರಾತ್ರಿ ನಡೆಯುವ ಯಕ್ಷಗಾನ ಉತ್ಸವ ಕೋಲ ಮೆಹಂದಿ ಕಾರ್ಯಕ್ರಮಗಳಿಗೂ ನಿರ್ಬಂಧ -Vishwanews24

ಉಡುಪಿ : ರಾತ್ರಿ ಕರ್ಫ್ಯೂ ; ರಾತ್ರಿ ನಡೆಯುವ ಯಕ್ಷಗಾನ ಉತ್ಸವ ಕೋಲ ಮೆಹಂದಿ ಕಾರ್ಯಕ್ರಮಗಳಿಗೂ ನಿರ್ಬಂಧ -Vishwanews24

ಉಡುಪಿ: ಕೋವಿಡ್ ನ ರೂಪಾಂತರದ ಪ್ರಭಾವವನ್ನು ನಿಯಂತ್ರಿಸಲು ಸರಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಅದರಂತೆ ಡಿ. 24ರ ರಾತ್ರಿ 11ರಿಂದ ಜ.2ರ ಬೆಳಗ್ಗೆ 5ರ ವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಗ ಸೂಚಿಯಲ್ಲಿ ಸೂಚಿಸಿರುವ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ತುರ್ತು ಸೇವೆಗಳನ್ನು ಹೊರತು ಪಡಿಸಿ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಉಡುಪಿ ಜಿಲ್ಲಾಡಳಿತ ಹೇಳಿದೆ.

ಈ ಕುರಿತಂತೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಮಾಹಿತಿ ನೀಡಿ, ರಾತ್ರಿ ನಡೆಯುವ ಯಕ್ಷಗಾನ, ದೇವಸ್ಥಾನಗಳ ಉತ್ಸವಗಳು, ಮೆಹಂದಿಯಂತಹ ಕಾರ್ಯಕ್ರಮಗಳು, ಕೋಲಗಳಿಗೆ ನಿರ್ಬಂಧ ಹೇರಲಾಗಿದ್ದು. ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿಯವರು ನೀಡಿದ ನಿರ್ದೇಶನದಂತೆ ಗುರುವಾರ ರಾತ್ರಿಯಿಂದ ಕರ್ಫ್ಯೂ ಜಾರಿಗೊಳಿಸಲು ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ತಿಳಿಸಿದರು. ಇನ್ನು ಉಡುಪಿ ಜಿಲ್ಲೆಗೆ ಸಂಬಂಧಿಸಿ ಪ್ರತ್ಯೇಕ ಆದೇಶವನ್ನು ಇಂದು ಹೊರಡಿಸಲಾಗುವುದು ಎಂದ ಅವರು, ಈ ಹಿಂದೆ ಕರ್ಫ್ಯೂ ಇದ್ದಾಗ ಪತ್ರಿಕೆಗಳಿಗೆ ರಿಯಾಯಿತಿ ನೀಡಲಾಗಿತ್ತು. ಅದರಂತೆಯೇ ಈ ಬಾರಿಯೂ ಪತ್ರಿಕೆಗಳ ಸಾಗಾಟ ಮತ್ತು ವಿತರಣೆಗೆ ರಿಯಾಯಿತಿ ಇರಲಿದೆ. ಯಾವುದೇ ಸಾಮಾನು ಸರಂಜಾಮುಗಳ ಸಾಗಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

23 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago