Featured

ಉಡುಪಿ : ರಾತ್ರಿ 8 ರಿಂದ 11 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ – vishwanews24

ಉಡುಪಿ : ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ..

ರಾತ್ರಿ 8 ರಿಂದ 11 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ಹಸಿರು ಪಟಾಕಿ ಬಳಕೆಯೊಂದಿಗೆ ಆಚರಿಸಿ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯಲ್ಲಿ ಪಟಾಕಿಗಳ ಮಾರಾಟ ಮತ್ತು ನಿಯಂತ್ರಿಸುವ ಕುರಿತು ಮಾತನಾಡಿದ ಅವರು, ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿಹ್ನೆಯಿದ್ದು, ಕ್ಯೂಆರ್ ಕೋಡ್ ಇರುವ ಪಟಾಕಿಗಳನ್ನೇ ಉಪಯೋಗಿಸಬೇಕು. ನವೆಂಬರ್ 12 ರಿಂದ 15 ರವರೆಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳನ್ನು ಬಳಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ಮಾಡಿರುತ್ತದೆ. ರಾತ್ರಿ 8 ರಿಂದ ರಾತ್ರಿ 11 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗುವುದು.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದAತೆ ಬಳಸಬೇಕು. ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ಸುಡುಮದ್ದುಗಳನ್ನು ಸ್ಪೋಟಿಸುವಂತಿಲ್ಲ. ತಹಶೀಲ್ದಾರರು, ವೃತ್ತ ನಿರೀಕ್ಷಕರು, ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಿ, ಅಲ್ಲಿ ಹಸಿರು ಪಟಾಕಿಯಲ್ಲದೆ, ಇನ್ನಾವುದಾದರೂ ನಿಷೇದಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಿತ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ತಾತ್ಕಾಲಿಕ ಪಟಾಕಿ ಮಳಿಗೆ ತೆರೆಯುವ ಮಾಲೀಕರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಮಳಿಗೆಗಳನ್ನು ತೆರೆಯಬೇಕು. ಅನುಮತಿ ನೀಡುವಾಗ ಸೂಚಿಸಿರುವ ಷರತ್ತುಗಳನ್ನು ತಪ್ಪದೇ ಪಾಲಿಸಬೇಕು.

ಸಾರ್ವಜನಿಕರಿಗೆ ಹಾಗೂ ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕ ಸ್ಥಳಗಳಾದ ಮೆಟ್ರೊ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮಾಲ್ ಗಳಲ್ಲಿ ಕರಪತ್ರ/ ಭಿತ್ತಿಪತ್ರಗಳನ್ನು ಹಂಚುವ ಮೂಲಕ ಹಾಗೂ ಟಿ.ವಿ ಮತ್ತು ರೇಡಿಯೋಗಳಲ್ಲಿ ಪ್ರಚಾರ ಪಡಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಬೇಕು. ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇದಿತ ಪಟಾಕಿಗಳನ್ನು ಸಾಗಾಟ ಮಾಡುವ ನಿರೀಕ್ಷೆಯಿದ್ದು ದೀಪಾವಳಿ ಹಬ್ಬ ಮುಗಿಯುವವರೆಗೂ ಜಿಲ್ಲೆಯ ಎಲ್ಲಾ ಗಡಿಭಾಗಗಳ ಚೆಕ್ ಪೋಸ್ಟ್ಗಳನ್ನು ವಾಣಿಜ್ಯ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿ,ನಿಷೇಧಿತ ಪಟಾಕಿಗಳು ಇದ್ದಲ್ಲಿ ಮುಟ್ಟುಗೋಲು ಹಾಕಿಕೊಳ್ಳಬೇಕು. ದೀಪಾವಳಿ ಸಮಯದಲ್ಲಿ ಉತ್ಪಾದನೆಯಾಗುವ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಯ ಕುರಿತು ಸ್ಥಳೀಯ ಸಂಸ್ಥೆಗಳು ಕ್ರಮವಹಿಸಬೇಕು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago