Featured

ಉಡುಪಿ :  ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ ಶಿಪ್ ಕಂಚು ಪದಕ ವಿಜೇತೆ ಮಾನ್ಸಿ ಜೆ. ಸುವರ್ಣ ಗೆ ಯಶ್ಪಾಲ್ ಸುವರ್ಣ ಅಭಿನಂದನೆ  – vishwanews24

ಉಡುಪಿ :  ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ ಶಿಪ್ ಕಂಚು ಪದಕ ವಿಜೇತೆ ಮಾನ್ಸಿ ಜೆ. ಸುವರ್ಣ ಗೆ ಯಶ್ಪಾಲ್ ಸುವರ್ಣ ಅಭಿನಂದನೆ

ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ವಿಜೇತರಾದ ಮಲ್ಪೆಯ ಕುಮಾರಿ ಮಾನ್ಸಿ ಜೆ. ಸುವರ್ಣ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

ಮಲ್ಪೆಯ ಜಗದೀಶ್ ಸುವರ್ಣ ಮತ್ತು ಮಾಲತಿ ದಂಪತಿಯ ಸುಪುತ್ರಿ ಮಾನ್ಸಿ ಜೆ ಸುವರ್ಣ ರಾಷ್ಟ್ರಮಟ್ಟದ ಬಾಕ್ಸಿಂಗ್ ಚಾಂಪಿಯನ್ ಶಿಪ್ ರಾಜ್ಯದ ಪ್ರತಿನಿಧಿಯಾಗಿ ಕಂಚಿನ ಪದಕ ಗೆಲ್ಲುವ ಮೂಲಕ ಕರ್ನಾಟಕ ರಾಜ್ಯ ಹಾಗೂ ಉಡುಪಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಮಾನ್ಸಿ ಜೆ ಸುವರ್ಣ ರವರ ಈ ಸಾಧನೆ ರಾಜ್ಯದ ಇತರ ಬಾಕ್ಸರ್ ಗಳಿಗೆ ಪ್ರೇರಣೆ ನೀಡಲಿದ್ದು, ಮುಂಬರುವ ದಿನಗಳಲ್ಲಿ ಬಾಕ್ಸಿಂಗ್ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶಕ್ಕೆ ಗೌರವ ತರುವಂತಾಗಲಿ ಎಂದು ಯಶ್ ಪಾಲ್ ಸುವರ್ಣ ಶುಭ ಹಾರೈಸಿದ್ದಾರೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

5 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

6 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

6 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

7 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

8 hours ago