ಉಡುಪಿ : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಟೋಲ್ ಸಂಗ್ರಹ ಮಾಡಲು ಬಿಡುವುದಿಲ್ಲ : ಶೋಭಾ ಕರಂದ್ಲಾಜೆ -Vishwanews24
ಉಡುಪಿ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳಿಗೆ ವೇಗ ನೀಡಿ ಅವಧಿಯೊಳಗಡೆ ಪೂರ್ಣಗೊಳಿಸಬೇಕು. ಪಡುಬಿದ್ರಿ ರಸ್ತೆ ಕಾಮಗಾರಿ ಮತ್ತು ಕುಂದಾಪುರದ ಶಾಸ್ತ್ರಿ ಸರ್ಕಲ್ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್ 31 ರ ದಿನ ನಿಗದಿಪಡಿಸಿದ್ದು, ಹೇಳಿದ ದಿನಾಂಕದಂದು ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಟೋಲ್ ಸಂಗ್ರಹ ಮಾಡಲು ಬಿಡುವುದಿಲ್ಲ ಎಂದು ಉಡುಪಿ ಜಿಲ್ಲಾ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಬುಧವಾರ ಜಿಲ್ಲಾ ಪಂಚಾಯತ್ನ ವಿ.ಎಸ್ಆಚಾರ್ಯ ಸಭಾಂಗಣದಲ್ಲಿ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಲ್ಪೆ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಡ್ಡಿಯಾಗುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ, ಯುದ್ದೋಪಾದಿಯಲ್ಲಿ ಕೆಲಸ ಮಾಡಿ, ಮಳೆಗಾಲಕ್ಕೂ ಮೊದಲೆ ಹೆದ್ದಾರಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಏಪ್ರಿಲ್ ಅಂತ್ಯದೊಳಗೆ ಪಡುಬಿದ್ರಿ ಮತ್ತುಶಾಸ್ತ್ರಿ ಸರ್ಕಲ್ ಫ್ಲೈಓವರ್ ಕಾಮಗಾರಿಗಳನ್ನು ಪೂರ್ಣಗೊಳಿಸುವುದಾಗಿ ಹೇಳಿದರು. ಕಾಮಗಾರಿಗಳಲ್ಲಿ ವಿಳಂಬ ತೋರುವ ಗುತ್ತಿಗೆ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಸಂಸದೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ನೀತಾ ಗುರುರಾಜ್ ಪೂಜಾರಿ, ಜಿಲ್ಲಾಧಿಕಾರಿ ಜಿ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋತ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
