Featured

ಉಡುಪಿ: ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿ, ಅಪಘಾತ ಪ್ರಕರಣಗಳಾಗದಂತೆ ಕ್ರಮವಹಿಸಿ : ಸಂಸದ ಕೋಟ – vishwanews24

ಉಡುಪಿ: ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆಯನ್ನು ಉತ್ತಮವಾಗಿ ನಿರ್ವಹಿಸಿ, ಅಪಘಾತ ಪ್ರಕರಣಗಳಾಗದಂತೆ ಕ್ರಮವಹಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

     ಉಡುಪಿ: ಜನ ಸಾಮಾನ್ಯರು ಹೆದ್ದಾರಿ ಟೋಲ್ ಪಾವತಿಸುವುದರೊಂದಿಗೆ ಸಂಚಾರ ಕೈಗೊಳ್ಳುತ್ತಾರೆ. ಟೋಲ್ ಶುಲ್ಕ ಪಡೆದ ಗುತ್ತಿಗೆದಾರರು ಹೆದ್ದಾರಿ ನಿರ್ವಹಣೆಯನ್ನು ಉತ್ತಮವಾಗಿ ಮಾಡುವುದರೊಂದಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಹೆದ್ದಾರಿಯಲ್ಲಿ ಅಪಘಾತದಿಂದ ಪ್ರಾಣ ಕಳೆದುಕೊಳ್ಳುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗದಂತೆ ಎಚ್ಚರ ವಹಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಪ್ರಾಧಿಕಾರದ ಅಭಿಯಂತರರುಗಳಿಗೆ ಸೂಚನೆ ನೀಡಿದರು.

   ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟಿçà ಹೆದ್ದಾರಿ 66 ಕಾಮಗಾರಿಗಳ ಪ್ರಗತಿಯ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ವರ್ಷದಿಂದ 250 ಕ್ಕೂ ಹೆಚ್ಚು ರಸ್ತೆ ಅಪಘಾತಗಳು ಉಂಟಾಗಿ ಸಾವುನೋವುಗಳು ಉಂಟಾಗಿವೆ. ರಾಷ್ಟಿçà ಹೆದ್ದಾರಿ 66 ರಲ್ಲಿ ಕಳೆದ ಎರಡು ತಿಂಗಳಿA ರಸ್ತೆ ಅಪಘಾತದಲ್ಲಿ 8 ಕ್ಕೂ ಹೆಚ್ಚು ಜನ ಅಪಘಾತದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ರಾಷ್ಟಿçà ಹೆದ್ದಾರಿಯ ಗುತ್ತಿಗೆದಾರರು ಟೋಲ್ ಸಂಗ್ರಹವನ್ನು ಮಾಡುವುದೊಂದೆ ಗುರಿಯಾದರೆ ಸಾಲದು. ಹೆಚ್ಚು ಅಪಘಾತವಾಗುತ್ತಿರುವ ಕಪ್ಪು ಚುಕ್ಕೆ ಸ್ಥಳಗಳಲ್ಲಿ ವೈಜ್ಞಾನಿಕವಾಗಿ ಕಾಮಗಾರಿಗಳನ್ನು ಕೈಗೊಳ್ಳುವುದು, ರಸ್ತೆ ದಾರಿದೀಪಗಳನ್ನು ಅಳವಡಿಸುವುದು, ಸೂಚನಾ ಫಲಕಗಳನ್ನು ಅಳವಡಿಸುವುದು ಮತ್ತಿತರ ಕಾರ್ಯಗಳನ್ನು ಒಂದು ತಿಂಗಳ ಒಳಗಾಗಿ ಕೈಗೊಳ್ಳುವುದರೊಂದಿಗೆ ಅಪಘಾತ ಮುಕ್ತ ವಲಯವನ್ನಾಗಿಸಲು ಮುಂದಾಗಬೇಕೆAದು ರಾಷ್ಟಿçà ಹೆದ್ದಾರಿಯ ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೆಜಮಾಡಿಯಿಂದ ಕುಂದಾಪುರ ವರೆಗೂ 66 ಕಿ.ಮೀ ವರೆಗೂ ಸವೀಸ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುವ ಅವಶ್ಯಕತೆ ಇದ್ದು, ಪ್ರಸ್ತುತ ಕೋಟೇಶ್ವರದಿಂದ ಹೆಜಮಾಡಿವರೆಗೆ 26 ಕಿ.ಮೀ ಸವೀಸ್ ರಸ್ತೆ ಹಾಗೂ 3 ಫೂಟ್ ಓವರ್ ಬ್ರಿಡ್ಜ್ ಕಾಮಗಾರಿಗೆ ಈಗಾಗಲೇ ಅನುಮೋದನೆ ಸಿಕ್ಕಿದ್ದು, ಶೇ.70 ಕ್ಕೂ ಹೆಚ್ಚು ಕಾಮಗಾರಿಗೆ ಅಗತ್ಯವಿರುವ ಸಾಮಾಗ್ರಿಗಳನ್ನು ಸಂಗ್ರಹಿಸಿ, ಶೇಖರಣೆಗೊಳಿಸುವುದರೊಂದಿಗೆ ಸವೀಸ್ ರಸ್ತೆ ಕಾಮಗಾರಿಗಳನ್ನು ಪ್ರಾರಂಭಿಸಬೇಕೆ0ದು ತಿಳಿಸಿದರು.

ರಾಷ್ಟಿçà ಹೆದ್ದಾರಿಯ ಪಡುಬಿದ್ರೆ, ಬ್ರಹ್ಮಾವರ ಹಾಗೂ ಕೋಟದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಲು ಡಿ.ಪಿ.ಆರ್ ಅನ್ನು ಕೂಡಲೇ ತಯಾರಿಸಿ, ನೀಡಿದ್ದಲ್ಲಿ ಕೇಂದ್ರ ರಾಷ್ಟಿçà ಹೆದ್ದಾರಿ ಪ್ರಾಧಿಕಾರದಿಂದ ಅನುಮತಿಯನ್ನು ದೊರಕಿಸಿ ಕೊಡಲಾಗುವುದು. ಕಾರ್ಯಕ್ಕೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕಾಣಿಸುವ ಹಾಗೆ ಕಾಮಗಾರಿಗೆ ಸಂಬAಧಿಸಿದ ಸೂಚನಾ ಫಲಕಗಳನ್ನು ಅಳವಡಿಸಬೇಕು. ಪಡುಬಿದ್ರೆಯಲ್ಲಿ ದಾರಿದೀಪಗಳು ಸರಿಯಾದ ನಿರ್ವಹಣೆ ಇಲ್ಲದೇ ಅಪಘಾತಗಳು ಆಗುತ್ತಿವೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ. ಗುತ್ತಿಗೆದಾರರು ಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕೆಂದು ಸೂಚನೆ ನೀಡಿದ ಅವರು, ಇವುಗಳ ನಿರ್ವಹಣೆ ಸರಿಯಿಲ್ಲದೇ ಅಪಘಾತಗಳು ಆದಲ್ಲಿ ಸಂಬAಧಪಟ್ಟ ಅಭಿಯಂತರರುಗಳು ಹಾಗೂ ಗುತ್ತಿಗೆದಾರರ ಮೇಲೂ ಸಹ ನಿರ್ಲಕ್ಷö್ಯ ವಹಿಸಿರುವುದರ ಬಗ್ಗೆ ಪ್ರಕರಣದಲ್ಲಿ ಅಪರಾಧಿಯನ್ನಾಗಿಸಲಾಗುವುದು ಎಂದರು.

 ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೆಲವು ದಾರಿದೀಪಗಳನ್ನು ಅಳವಡಿಸಿದ್ದು, ಅವುಗಳು ಪ್ರಕಾಶಮಾನವಾಗಿ ಇಲ್ಲದೇ ಇರುವುದು ಕಂಡುಬರುತ್ತಿದೆ. ಕನಿಷ್ಠ 240 ವೋಲ್ಟ್÷್ಸ ಗಿಂತಲೂ ಹೆಚ್ಚು ಪ್ರಕಾಶಮಾನವಾಗಿರುವ ಬಲ್ಬ್ಗಳನ್ನು ಅಳವಡಿಸಬೇಕೆಂದು ಸೂಚನೆ ನೀಡಿದರು

 ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಉದ್ಯಾವರದಿಂದ ಬಲೈಪಾದೆವರೆಗಿನ ಸವೀಸ್ ರಸ್ತೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಗೊಳ್ಳುವುದರೊಂದಿಗೆ ಸರ್ವೀಸ್ ರಸ್ತೆಯನ್ನು ನಿರ್ಮಾಣ ಮಾಡಬೇಕು ಎಂದು ಸಭೆಯ ಗಮನಕ್ಕೆ ತಂದರು

 ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪಡುಬಿದ್ರೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಉಂಟಾಗಿ ಸಾವುನೋವಿನ ಪ್ರಕರಣಗಳು ಉಂಟಾಗುತ್ತಿವೆ. ಮೇಲ್ಸೇತುವೆ ಕಾಮಗಾರಿಯನ್ನು ಆದ್ಯತೆಯ ಮೇಲೆ ಕೈಗೊಂಡಲ್ಲಿ ಅಪಘಾತ ಪ್ರಕರಣಗಳನ್ನು ತಡೆಯಬಹುದು ಎಂದರು

ರಾಷ್ಟ್ರೀಯ ಹೆದ್ದಾರಿ ಉಳಿಸಿ ಸಮಿತಿಯ ಸದಸ್ಯರುಗಳು ಬ್ರಹ್ಮಾವರ ನಗರ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ, ಫ್ಲೆöÊ ಓವರ್, ವಿದ್ಯುತ್ ದೀಪಗಳ ಅಳವಡಿಕೆ, ರಸ್ತೆಯ ಮೀಡಿಯನ್ ಓಪನಿಂಗ್, ಮೇಲ್ಸೇತುವೆ ಕಾಮಗಾರಿ ಸೇರಿದಂತೆ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳುವುದರೊಂದಿಗೆ ಅಪಘಾತಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಸಭೆಯ ಗಮನಕ್ಕೆ ತಂದರು.  

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಸಹಾಯಕ ಕಮೀಷನರ್ ರಶ್ಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಗುತ್ತಿಗೆದಾರರುಗಳು, ಅಭಿಯಂತರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

18 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

19 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

19 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

20 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

21 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

21 hours ago