Featured

ಉಡುಪಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ : ಕೋಟ ಶ್ರೀನಿವಾಸ ಪೂಜಾರಿ

     ಉಡುಪಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಟೋಲ್‌ಗಳನ್ನು ಸಂಗ್ರಹ ಮಾಡಲಾಗುತ್ತದೆ. ಅದಕ್ಕನುಗುಣವಾಗಿ ರಸ್ತೆಯಲ್ಲಿ ವಾಹನಗಳು ಸುಗಮ ಹಾಗೂ ಸುರಕ್ಷಿತವಾಗಿ ಸಂಚರಿಸಲು ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವುದರ ಜೊತೆಗೆ ಅವುಗಳ ನಿರ್ವಹಣೆಯನ್ನು ಕಾಲಕಾಲಕ್ಕೆ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರುಗಳಿಗೆ ಉಡುಪಿ– ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

   ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಹೆದ್ದಾರಿ-66 ರ ಕೋಟ, ಪಡುಬಿದ್ರೆ, ತೆಕ್ಕಟ್ಟೆ ಸೇರಿದಂತೆ ಮುಂತಾದ ಸ್ಥಳಗಳಲ್ಲಿ ಸರಣಿ ಅಪಘಾತಗಳು ನಡೆಯುತ್ತಿರುವ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 

   ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ರಸ್ತೆ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಸಾವು–ನೋವುಗಳು ಉಂಟಾಗುತ್ತಿವೆ. ರಾಷ್ಟಿçÃಯ ಹೆದ್ದಾರಿಯ ಗುತ್ತಿಗೆದಾರರು ಟೋಲ್ ಸಂಗ್ರಹವನ್ನು ಮಾಡುವುದೊಂದೆ ತಮ್ಮ ಗುರಿಯಾಗಿಸಿಕೊಂಡರೆ ಸಾಲದು. ಟೋಲ್ ವಸೂಲಿಯೊಂದಿಗೆ ನಿಯಮಾನುಸಾರ ರಾ. ಹೆದ್ದಾರಿಗಳ ನಿರ್ವಹಣೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರೊಂದಿಗೆ ಅಪಘಾತಗಳು ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ರಾ.ಹೆ. ಯಲ್ಲಿ ನಿರ್ವಹಣೆಯ ಕೊರತೆಯಿಂದ ಅಪಘಾತಗಳು ಸಂಭವಿಸಿದ್ದಲ್ಲಿ ಸಂಬAಧಪಟ್ಟ ಅಧಿಕಾರಿಗಳು ಅಥವಾ ಗುತ್ತಿಗೆದಾರರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು. 

   ರಾಷ್ಟ್ರೀಯ ಹೆದ್ದಾರಿಯ ಟೋಲ್ ಗುತ್ತಿಗೆ ನೀಡುವ ಸಂದರ್ಭದಲ್ಲಿ ಗುತ್ತಿಗೆದಾರರು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ನಿಖರವಾಗಿ ತಿಳಿಸಿರುತ್ತಾರೆ. ಆದರೆ, ಜಿಲ್ಲೆಯಲ್ಲಿ ಸರಕಾರದ ಮಾರ್ಗಸೂಚಿಯನ್ವಯ ರಾಷ್ಟಿçÃಯ ಹೆದ್ದಾರಿಗಳ ನಿರ್ವಹಣೆ ಸಮರ್ಪಕವಾಗಿ ಆಗುತ್ತಿಲ್ಲ. ಇದೇ ರೀತಿ ಮುಂದುವರೆದಲ್ಲಿ ಜನರು ಟೋಲ್‌ನ ಹಣವನ್ನು ಪಾವತಿಸದೇ ಇರುವ ಸಾಧ್ಯತೆಗಳು ಇರುತ್ತವೆ. ಈ ಬಗ್ಗೆ ಎಚ್ಚರವಹಿಸಬೇಕು ಎಂದರು.

   ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ 22 ಕಪ್ಪು ಚುಕ್ಕೆ (ಬ್ಲಾಕ್ ಸ್ಪಾಟ್ಸ್) ಪ್ರದೇಶಗಳನ್ನು ಗುರುತಿಸಲಾಗಿದ್ದು, ಸದರಿ ಸ್ಥಳಗಳು ಸೇರಿದಂತೆ ಪ್ರಮುಖ ಜಂಕ್ಷನ್‌ಗಳಲ್ಲಿ ದಾರಿದೀಪ, ಸೂಚನಾ ಫಲಕ, ಬ್ಯಾರಿಕೇಡ್, ಬ್ಲಿಂರ‍್ಸ್ ಅಳವಡಿಕೆ ಸೇರಿದಂತೆ ಮತ್ತಿತರ ವೈಜ್ಞಾನಿಕ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಳ್ಳುವುದರೊಂದಿಗೆ ಅಪಘಾತ ಮುಕ್ತ ವಲಯವನ್ನಾಗಿಸಲು ಮುಂದಾಗಬೇಕು ಎಂದು ರಾಷ್ಟಿçÃಯ ಹೆದ್ದಾರಿಯ ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. 

   ನಗರದ ಅಂಬಾಗಿಲು ನಿಂದ ಎಲ್.ವಿ.ಟಿ ವರೆಗೆ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಈಗಾಗಲೇ ಮರಗಳ ತೆರವು, ಚರಂಡಿ ನಿರ್ಮಾಣ ಕೆಲಸಗಳು ಆರಂಭವಾಗಿದ್ದು, ಇದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಅಂಬಾಗಿಲು ಪ್ರಮುಖ ಜಂಕ್ಷನ್ ಆಗಿರುವ ಹಿನ್ನೆಲೆ, ವಾಹನಗಳ ದಟ್ಟಣೆಯಿಂದ ಯಾವುದೇ ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು. 

   ಜಿಲ್ಲೆಯ ನಿಟ್ಟೂರು, ತೆಕ್ಕಟ್ಟೆ, ಕುಂಭಾಶಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಈಗಾಗಲೇ ಕೈಗೆತ್ತಿಕೊಂಡಿದ್ದು, ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು. ಈ ಭಾಗದಲ್ಲಿ ಅಪಘಾತಗಳು ಆಗಿಂದಾಗ್ಗೆ ಸಂಭವಿಸುತ್ತಿವೆ ಎಂದರು.

   ಕಲ್ಯಾಣಪುರ – ಸಂತೆಕಟ್ಟೆ ಅಂಡರ್‌ಪಾಸ್ ನಲ್ಲಿ ಅಳವಡಿಸಿರುವ ಬೀದಿ ದೀಪಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಇರುವುದರಿಂದ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರುಗಳಿಗೆ ತೊಂದರೆ ಉಂಟಾಗುತ್ತಿದೆ. ಮೆಸ್ಕಾಂ ಹಾಗೂ ಎನ್.ಹೆಚ್.ಎ.ಐ ಅಧಿಕಾರಿಗಳು ಸಮನ್ವಯ ಹೊಂದಿ ರಾತ್ರಿ ವೇಳೆ ನಿರಂತರ ದೀಪಗಳು ಉರಿಯುತ್ತಿರುವಂತೆ ನೋಡಿಕೊಳ್ಳಬೇಕು ಎಂದರು.  

ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳ 20 ಕಿ.ಮೀ ವ್ಯಾಪ್ತಿಯ ಒಳಗೆ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳಿಗೆ ನವೆಂಬರ್ 01 ರಿಂದ ರಿಯಾಯಿತಿ ದರದಲ್ಲಿ ಸ್ಥಳೀಯ ಫಾಸ್ಟ್ ಟ್ಯಾಗ್ ನೀಡುವ ಕುರಿತು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರರು ಅಗತ್ಯ ಕ್ರಮವನ್ನು ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು. 

   ತೆಂಕ ಎರ್ಮಾಳಿನಲ್ಲಿ ನಿರ್ಮಾಣವಾಗುತ್ತಿರುವ ಸ್ಕೆöÊವಾಕ್ ಕಾಮಗಾರಿಗೆ ಸ್ಥಳೀಯರಿಂದ ವಿರೋಧಗಳು ವ್ಯಕ್ತವಾಗುತ್ತಿದ್ದು, ಈ ಕಾಮಗಾರಿಯನ್ನು ಸ್ಥಗಿತಗೊಳಿಸಿ, ಅಂಬಾಗಿಲು, ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಸೇರಿದಂತೆ ಇತರೆ ಜನದಟ್ಟಣೆ ಇರುವ ಸ್ಥಳಗಳಲ್ಲಿ ಸ್ಕೆöÊವಾಕ್ ನಿರ್ಮಾಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದ ಅವರು, ಕೇರಳ ಮಾದರಿ ರೀತಿಯಲ್ಲಿಯೇ ಕುಂದಾಪುರದಿAದ ತಲಪಾಡಿಯವರೆಗೆ ಅಪಘಾತ ರಹಿತ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಡಿ.ಪಿ.ಆರ್ ಆಗುತ್ತಿದೆ ಎಂದರು. 

   ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಗಳು ಇಲ್ಲದಿದ್ದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಅಸಮಾಧಾನ ಜನರು ವ್ಯಕ್ತಪಡಿಸುತ್ತಾರೆ.  ಪಡುಬಿದ್ರೆಯಲ್ಲಿ ವಾಹನಗಳ ಹೆಚ್ಚಿನ ಸಂಚಾರದಿAದ ಹೆಚ್ಚು ರಸ್ತೆ ಅಪಘಾತಗಳು ಉಂಟಾಗಿ ಸಾವು–ನೋವಿನ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ಸ್ಥಳದಲ್ಲಿ ಮೇಲ್ಸೇತುವೆ ಅಥವಾ ಅಂಡರ್‌ಪಾಸ್ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡಲ್ಲಿ ಅಪಘಾತ ಪ್ರಕರಣಗಳನ್ನು ತಡೆಯಬಹುದು ಎಂದು ಅಭಿಪ್ರಾಯಪಟ್ಟರು. 

   ಶಾಸಕ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ಬಲೈಪಾದೆಯಿಂದ ಕೊರಂಗ್ರಪಾಡಿವರೆಗಿನ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಬೇಕು. ಅಪಘಾತವಾಗುವಂತಹ ವಲಯಗಳಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ರಸ್ತೆ ಸುರಕ್ಷತಾ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು. 

   ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಡಿ.ಎಫ್.ಓ ರುಥ್ರೇನ್ ಪಿ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಕಮೀಷನರ್ ಮಹೇಶ್ ಪಿ.ಎಸ್, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಆಜ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಗುತ್ತಿಗೆದಾರರುಗಳು, ಅಭಿಯಂತರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ರಾ.ಹೆ. ಸಮಸ್ಯೆ ಬಗೆಹರಿಸದಿದ್ದಲ್ಲಿ ಟೋಲ್‌ ಕಟ್ಟದಂತೆ ಜಿಲ್ಲೆಯ ಜನರಿಗೆ ಕರೆ : ಸಂಸದ ಕೋಟ ಎಚ್ಚರಿಕೆ – vishwanews24

ರಾ.ಹೆ. ಸಮಸ್ಯೆ ಬಗೆಹರಿಸದಿದ್ದಲ್ಲಿ ಟೋಲ್‌ ಕಟ್ಟದಂತೆ ಜಿಲ್ಲೆಯ ಜನರಿಗೆ ಕರೆ : ಸಂಸದ ಕೋಟ ಎಚ್ಚರಿಕೆ ಮಣಿಪಾಲ: ರಾಷ್ಟ್ರೀಯ ಹೆದ್ದಾರಿಯಲ್ಲಿ…

9 minutes ago

ಶಿರ್ವ: ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂತನ  ಧ್ವಜಮರ ಸಮರ್ಪಣೆ – vishwanews24

ಶಿರ್ವ: ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ನೂತನ  ಧ್ವಜಮರ ಸಮರ್ಪಣೆ ಶಿರ್ವ: ಕುತ್ಯಾರು- ಪಾದೂರು-ಕಳತ್ತೂರು ಗ್ರಾಮಾಧಿಪತಿ ಕಳತ್ತೂರು ಶ್ರೀ ಮಹಾಲಿಂಗೇಶ್ವರ…

16 minutes ago

ಮೊಸರಿನ ದರ ಲೀಟರ್‌ಗೆ 14 ರೂ. ಹೆಚ್ಚಳ; ನ.1 ರಿಂದ ಜಾರಿಗೆ :  ಕೆಎಂಎಫ್ ಆದೇಶ – vishwanews24

ಹಾಲಿನ ಬೆನ್ನಲ್ಲೇ ಗ್ರಾಹಕರಿಗೆ ನಂದಿನಿ ಮೊಸರಿನ ದರ ಏರಿಕೆ ಬಿಸಿ:  ಲೀಟರ್‌ಗೆ 14 ರೂ. ಹೆಚ್ಚಳ; ನ.1 ರಿಂದ ಜಾರಿಗೆ …

25 minutes ago

ಕುಂದಾಪುರ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಸ್ಕೂಟರ್‌ಗೆ ಡಿಕ್ಕಿ; ಇಬ್ಬರಿಗೆ ಗಾಯ, ಮೂವರ ಬಂಧನ – vishwanews24

ಕುಂದಾಪುರ: ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಸ್ಕೂಟರ್‌ಗೆ ಡಿಕ್ಕಿ; ಇಬ್ಬರಿಗೆ ಗಾಯ, ಮೂವರ ಬಂಧನ ಕುಂದಾಪುರ: ಅತಿವೇಗ ಮತ್ತು ನಿರ್ಲಕ್ಷ್ಯದ…

32 minutes ago

ಉಡುಪಿ: ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕ ಆತ್ಮಹತ್ಯೆ – vishwanews24

ಉಡುಪಿ: ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕ ಆತ್ಮಹತ್ಯೆ ಉಡುಪಿ : ಉಡುಪಿ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.30…

40 minutes ago

ಮಂಗಳೂರು: ಕಂಬಳದಲ್ಲಿ ಗೆದ್ದ ಚಿನ್ನದ ಪದಕ ಅನಾರೋಗ್ಯಪೀಡಿತ ಮಾಜಿ ಕಾರ್ಮಿಕನಿಗೆ ಉಡುಗೊರೆ: ಪದವು ಕಾನಡ್ಕ ತಂಡದ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ – vishwanews24

ಮಂಗಳೂರು: ಕಂಬಳದಲ್ಲಿ ಗೆದ್ದ ಚಿನ್ನದ ಪದಕ ಅನಾರೋಗ್ಯಪೀಡಿತ ಮಾಜಿ ಕಾರ್ಮಿಕನಿಗೆ ಉಡುಗೊರೆ: ಪದವು ಕಾನಡ್ಕ ತಂಡದ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ…

19 hours ago