ಉಡುಪಿ: ರೈತರಿಗೆ ನಿಗಧಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಧಾರ್ ಕಾಯ್ದೆಯ ಕಲಂ 4(4) (ಬಿ) (2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿ ನೀಡಲಾಗಿದ್ದು, ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್ಸೈಟ್ https://landrecords.karnataka.gov.in/Service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್ನೊಂದಿಗೆ ಲಿಂಕ್ ಮಾಡಿಕೊಳ್ಳಬಹುದಾಗಿದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬ0ಧಪಟ್ಟ ಗ್ರಾಮ ಆಡಳಿತಾಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.
ಪಹಣಿಯೊಂದಿಗೆ ಆಧಾರ್ ಜೋಡಣೆಗೆ ಜುಲೈ 31 ಕೊನೆಯ ದಿನವಾಗಿದ್ದು, ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಸರಕಾರಿ ಸೌಲಭ್ಯದಿಂದ ವಂಚಿತರಾಗಬಾರದೆAಬ ಹಿನ್ನಲೆಯಲ್ಲಿ 2024 ರ ಜುಲೈ ಅಂತ್ಯದೊಳಗಾಗಿ ಕುಂದಾಪುರ ತಾಲೂಕಿನ ರೈತರು ಪಹಣಿಯೊಂದಿಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವಂತೆ ಕುಂದಾಪುರ ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…