Featured

ಉಡುಪಿ : ರೈತ ಉತ್ಪಾದಕ ಕಂಪನಿ ಮೂಲಕ ಕೃಷಿ ಸೌಕರ್ಯಗಳನ್ನು ರೈತರ ಮನೆಬಾಗಿಲಿಗೆ ತಲುಪಿಸಲು ಸಾಧ್ಯ: ಕೆ. ರಘುಪತಿ ಭಟ್  – Vishwanews24

ಉಡುಪಿ : ರೈತ ಉತ್ಪಾದಕ ಕಂಪನಿ ಮೂಲಕ ಕೃಷಿ ಸೌಕರ್ಯಗಳನ್ನು ರೈತರ ಮನೆಬಾಗಿಲಿಗೆ ತಲುಪಿಸಲು ಸಾಧ್ಯ: ಕೆ. ರಘುಪತಿ ಭಟ್

ಉಡುಪಿ: ಕೃಷಿ ಉತ್ತೇಜನ ಕಾರ್ಯಕ್ರಮಗಳನ್ನು ರೈತ ಉತ್ಪಾದಕ ಕಂಪನಿಗಳ ಮೂಲಕ ಅನುಷ್ಠಾನಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೇಂದು ಶಾಸಕರಾದ ಹಾಗೂ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ. ರಘುಪತಿ ಭಟ್ ಇವರು ತಿಳಿಸಿದರು.

ಇವರು ಉಡುಪಿ ತಾಲೂಕಿನ ಕೇದಾರೋತ್ತನ ರೈತ ಉತ್ಪಾದಕ ಕಂಪನಿಯಲ್ಲಿ ಜಲಾನಯನ ಅಭಿವೃದ್ದಿ ಇಲಾಖೆ, ಕೃಷಿ ಇಲಾಖೆ, ಹಾಗೂ ಸ್ಕೊಡ್‍ವೆಸ್ ಸಂಸ್ಥೆ ಸಹಯೋಗದಲ್ಲಿ ರಚಿತವಾಗಿರುವ ಕೇದಾರೋತ್ತನ ರೈತ ಉತ್ಪಾದಕ ಕಂಪನಿಯ ಸಭೆಯನ್ನು ಆಯೋಜನೆ ಮಾಡಲಾಗಿದ್ದು, ಕಂಪನಿಯ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕೃಷಿ ಉತ್ಪನ್ನಗಳಿಗೆ ಕೇದಾರೋತ್ತನ ರೈತ ಉತ್ಫಾದಕ ಕಂಪನಿಯಿಂದ ಉತ್ತೇಜನದ ಜೋತೆಗೆ ಮಾರುಕಟ್ಟೆ ಕಲ್ಪಸಿ ರೈತರಿಗೆ ಲಾಭದಾಯಕ ಕೃಷಿಯಾಗಿ ಪರಿವರ್ತಿಸುವಲ್ಲಿ ರೈತ ಉತ್ಪಾದಕ ಕಂಪನಿಯ ಪಾತ್ರ ಮಹತ್ವವಾಗಿದ್ದು, ಈ ನಿಟ್ಟಿನಲ್ಲಿ ಕಂಪನಿಯ ಎಲ್ಲಾ ನಿರ್ದೇಶಕರು ಹಾಗೂ ರೈತ ಬಾಂಧವರು ಶ್ರಮ ವಹಿಸಬೇಕೆಂದು ತಿಳಿಸಿದರು. ಕೃಷಿ ಕಾರ್ಯಕ್ರಮಗಳನ್ನು ಸುಸುತ್ರವಾಗಿ ಅನುಷ್ಠಾನಗೊಳಿಸುವ ಮೂಲಕ ಕೇದಾರೋತ್ತನ ರೈತ ಉತ್ಪಾದಕ ಕಂಪನಿಯು ಮಾದರಿಯಾಗಿ ರೂಪಿಸುವಲ್ಲಿ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಂಟಿ ಕೃಷಿ ನಿರ್ದೇಶಕರು ಕೆಂಪೆಗೌಡ ಇವರು ಮಾತನಾಡಿ ರೈತ ಉತ್ಪಾದಕ ಕಂಪನಿಗಳ ರೂಪ ರೇಷುಗಳು ಹಾಗೂ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ವಿವರಗಳನ್ನು ನೀಡಿದರು.

ಸಭೆಯಲ್ಲಿ ಸಹಾಯಕ ಕೃಷಿ ನಿದೇಶಕರಾದ ಮೋಹನ್‍ರಾಜ್, ರೈತ ಉತ್ಪಾದಕ ಕಂಪನಿಯ ನಿರ್ದೇಶಕರು ಹಾಗೂ ಸ್ಕೊಡ್‍ವೆಸ್ ಸಂಸ್ಥೆಯ ಸಂಯೋಜನಾಧಿಕಾರಿಯಾದ ಸೂರಜ್ ಶೆಟ್ಟಿ ಹಾಗೂ ಕೇದಾರೋತ್ತನ ಕಂಪನಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago