ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿದ್ದ ಬ್ಯಾಗ್ ಕಳವು – vishwanews24

Featured, ಉಡುಪಿ

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿದ್ದ ಬ್ಯಾಗ್ ಕಳವು

ಉಡುಪಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿದ್ದ ಬ್ಯಾಗ್ ಕಳವುಗೈದ ಬಗ್ಗೆ ದೂರು ದಾಖಲಾಗಿದೆ.

ಬೆಂಗಳೂರಿನಲ್ಲಿ ಕಂಪ್ಯೂಟರ್ ಸೈನ್ಸ್ ಓಡುತ್ತಿದ್ದ ವಿದ್ಯಾರ್ಥಿ, ಕುಮಟಾ ನಿವಾಸಿ ಅಭಿನ್‌ ವೈದ್ಯ (19) ಅವರು ಜ.23ರಂದು ರಾತ್ರಿ ಬೆಂಗಳೂರಿನಿಂದ ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹೋಗುತ್ತಿರುವಾಗ ಬ್ಯಾಗ್‌ನ್ನು ಸೀಟ್‌ನಲ್ಲಿರಿಸಿ ಶೌಚಾಲಯಕ್ಕೆ ತೆರಳಿದ್ದಾರೆ. ಆದರೆ ಮರಳಿ ಬರುವಷ್ಟರಲ್ಲಿ ಕಳ್ಳರು ಬ್ಯಾಗ್‌ ಅನ್ನು ಕಳವು ಮಾಡಿದ್ದಾರೆ.

ಉಡುಪಿ : ನೇಜಾರು ತಾಯಿ, ಮಕ್ಕಳ ಹತ್ಯೆ ಪ್ರಕರಣ : ವಿಶೇಷ ಸರಕಾರಿ ಅಭಿಯೋಜಕರಾಗಿ ಶಿವಪ್ರಸಾದ್ ಆಳ್ವ ನೇಮಕ – vishwanews24

ಬ್ಯಾಗ್‌ನಲ್ಲಿ ಆ್ಯಪಲ್‌ ಲ್ಯಾಪ್‌ಟಾಪ್‌, ಆ್ಯಪಲ್‌ ಇಯರ್‌ಬಡ್‌, ಚಿನ್ನದ ಸರ, ಬಟ್ಟೆ ಸೇರಿದಂತೆ ಒಟ್ಟು 1.80 ಲ.ರೂ. ಮೌಲ್ಯದ ಸೊತ್ತುಗಳನ್ನು ಕಳ್ಳರು ಕಳವು ಮಾಡಿದ್ದಾರೆ ಎಂದು ದೂರಲಾಗಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply