ಉಡುಪಿ : ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ದೂರು ದಾಖಲಾಗಿದೆ.
ಮುಂಬೈ ಚೆಂಬೂರಿನ ಹೆಲ್ಮೀನಾ ಸಾಲಿನ್ಸ್, ತಮ್ಮ ಮಗಳು, ಪತಿ ಮತ್ತು ಮೊಮ್ಮಗಳೊಂದಿಗೆ ಡಿ.26ರಂದು ಮಧ್ಯಾಹ್ನ ಮತ್ಸ್ಯಗಂಧ ರೈಲಿನಲ್ಲಿ ಒಡವೆಗಳಿದ್ದ ಒಂದು ವ್ಯಾನಿಟಿ ಬ್ಯಾಗ್, ಬಟ್ಟೆಗಳಿದ್ದ ಹ್ಯಾಂಡ್ ಬ್ಯಾಗ್ ಮತ್ತು ಸೂಟ್ಕೇಸ್ ಗಳೊಂದಿಗೆ ಉಡುಪಿಗೆ ಪ್ರಯಾಣಿಸುತಿದ್ದರು. ಹೆಲ್ಮೀನಾ ಸಾಲಿನ್ಸ್ ಒಡವೆಗಳಿದ್ದ ವ್ಯಾನಿಟಿ ಬ್ಯಾಗನ್ನು ತನ್ನ ತಲೆಯ ಬಳಿ ಇರಿಸಿ ರಾತ್ರಿ ಮಲಗಿದ್ದರು.
ಡಿ.27ರಂದು ಬೆಳಗ್ಗೆ 6.10ರ ಸುಮಾರಿಗೆ ಮುರ್ಡೇಶ್ವರ ರೈಲು ನಿಲ್ದಾಣ ಬಳಿ ಹೆಲ್ಮೀನಾ ಅವರ ಮಗಳು ಬ್ಯಾಗ್ ನೋಡಿದಾಗ ಅದರಲ್ಲಿದ್ದ 45,80,000ರೂ. ಮೌಲ್ಯದ 408 ಗ್ರಾಂ ಚಿನ್ನದ ಆಭರಣಗಳು ಹಾಗೂ 15,000ರೂ. ನಗದು ಕಳವಾಗಿರುವುದು ಕಂಡುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…