Featured

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 40 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಡೈಮಂಡ್ ಆಭರಣ ಕಳವು – Vishwanews24

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 40 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಡೈಮಂಡ್ ಆಭರಣ ಕಳವು

ಉಡುಪಿ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ ನಲ್ಲಿದ್ದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳನ್ನು ಕಳ್ಳರು‌ ಕಳವು ಮಾಡಿರುವ ಘಟನೆ ನಡೆದಿದೆ.

ಮಹಾರಾಷ್ಟ್ರ ಮುಲುಂದು ವೈಶಾಲಿ ನಗರದ ದೀಪಾ ರೈ(44) ಎಂಬವರು ಡಿ.6ರಂದು ನಡೆಯಲಿರುವ ಅತ್ತೆಯ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಮನೆಯಾದ ಕಟಪಾಡಿಗೆ ಡಿ.5ರಂದು ಅಕ್ಕ, ಭಾವ, ಅಮ್ಮ ಹಾಗೂ ತಂದೆಯೊಂದಿಗೆ ಮುಂಬಯಿಯ ಪನ್ ವೇಲಿನಿಂದ ಮತ್ಸ್ಯಗಂದ ರೈಲಿನಲ್ಲಿ ಉಡುಪಿಗೆ ಹೊರಟಿದ್ದರು.

ಮದುವೆ ಕಾರ್ಯಕ್ರಮದಲ್ಲಿ ಧರಿಸುವುದಕ್ಕಾಗಿ ಚಿನ್ನಾಭರಣಗಳನ್ನು 3 ಬ್ಯಾಗ್ ಗಳಲ್ಲಿ ಸೀರೆಯ ಮಧ್ಯ ಭಾಗದಲ್ಲಿ ಅಭರಣ ಇಟ್ಟುಕೊಂಡಿದ್ದರು. ಡಿ.6ರಂದು ಬೆಳಿಗ್ಗೆ ಸುಮಾರು 5 ಗಂಟೆಗೆ ರೈಲು ಕುಂದಾಪುರ ಸ್ಟೇಷನ್ ತಲುಪಿದ್ದು, ಉಡುಪಿಯಲ್ಲಿ ಇಳಿಯುವುದಕ್ಕೆ ಇವರು ಬ್ಯಾಗ್ ಗಳನ್ನು ರೈಲಿನ ಬಾಗಿಲಿನ ಬಳಿ ತಂದು ಇರಿಸಿದ್ದರು.

ರೈಲು ಮುಂಜಾನೆ 5.40 ಗಂಟೆಗೆ ಉಡುಪಿಯ ರೈಲು ಸ್ಟೇಷನ್ ಗೆ ಬಂದಿದ್ದು, ಬಳಿಕ ರೈಲಿನಿಂದ ಇಳಿದು ಕಟಪಾಡಿಯ ಮನೆಗೆ ಹೋಗಿ ಬ್ಯಾಗ್ ಪರಿಶೀಲಿಸಿದಾಗ 3 ಬ್ಯಾಗ್ ನಲ್ಲಿಟ್ಟಿರುವ ಚಿನ್ನಾಭರಣಗಳು ಮತ್ತು ಡೈಮಂಡ್ ಆಭರಣಗಳು ಕಳವಾಗಿರುವುದು ಕಂಡು ಬಂದಿದೆ. ಕಳವಾಗಿರುವ ಚಿನ್ನಾಭರಣಗಳ ಅಂದಾಜು ತೂಕ 850 ಗ್ರಾಂ ಆಗಿದ್ದು, ಒಟ್ಟು ಮೌಲ್ಯ 34 ಲಕ್ಷ ರೂ. ಆಗಬಹುದು ಹಾಗೂ ಕಳವಾದ ಡೈಮಂಡ್ ನ ಮೌಲ್ಯ 6 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 40 ಲಕ್ಷ ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ರೈಲಿನಲ್ಲಿದ್ದ 4 ಜನ 40 ರಿಂದ 50 ವರ್ಷ ವಯಸ್ಸಿನ ಕಳ್ಳರು ಚಿನ್ನಾಭರಣ ಗಳನ್ನು ಕಳವು ಮಾಡಿರಬಹುದು ಎಂದು ಶಂಕಿಸಲಾಗಿದೆ ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

16 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

16 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

16 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

17 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

17 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

17 hours ago