ಮಣಿಪಾಲ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವುದು ವರದಿಯಾಗಿದೆ.
ಸಂಬಂಧಿಕ ಮದುವೆ ಕಾರ್ಯಕ್ರಮಕ್ಕಾಗಿ ಮುಂಬೈಯ ಅವಿನಾಶ್ ಎಂಬವರು ತಮ್ಮ ಕುಟುಂಬದವರೊಂದಿಗೆ ನ.15ರಂದು ರೈಲಿನಲ್ಲಿ ಮುಂಬೈಯಿಂದ ಉಡುಪಿಗೆ ಹೊರಟಿದ್ದರು. ಇವರು ಒಡವೆ ಹಾಗೂ ಬಟ್ಟೆಗಳಿದ್ದ 4 ಸೂಟ್ ಕೇಸ್ಗಳನ್ನು ಬೀಗ ಹಾಕದೇ ಜೀಪ್ ಲಾಕ್ ಮಾಡಿ ಸೀಟಿನ ಕೆಳಗೆ ಇಟ್ಟಿದ್ದರು.
ಇವರು ನ.16ರಂದು ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಇಳಿದು ಕಟಪಾಡಿ ಸಮೀಪದ ಮಣಿಪುರದಲ್ಲಿರುವ ಮನೆಗೆ ಹೋಗಿದ್ದು, ಸಂಜೆ ಬ್ಯಾಗ್ ತೆರೆದು ನೋಡಿದಾಗ 2 ಬ್ಯಾಗಿಗಳಲ್ಲಿಟ್ಟಿದ್ದ 63 ಲಕ್ಷ ರೂ. ಮೌಲ್ಯದ 900 ಗ್ರಾಂ ಚಿನ್ನಾಭರಣಗಳು ಕಳವಾಗಿರುವುದು ಕಂಡು ಬಂದಿದೆ. ಪನ್ವೆಲ್ ನಿಂದ ಕಂಕಾವಲಿ ರೈಲ್ವೆ ನಿಲ್ದಾಣದ ಮಧ್ಯೆ ಯಾರೋ ಕಳ್ಳರು ಕಳವು ಮಾಡಿರಬಹುದೆಂದು ದೂರಲಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಈ ಘಟನೆ ಮಹಾರಾಷ್ಟ್ರ ರಾಜ್ಯದಲ್ಲಿ ಆಗಿರುವುದರಿಂದ ಮುಂದೆ ಈ ಪ್ರಕರಣ ಸಂಬಂಧಪಟ್ಟ ಠಾಣೆಗೆ ವರ್ಗಾವಣೆಗೊಳ್ಳುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…