Featured

ಉಡುಪಿ ರೈಲ್ವೆ ನಿಲ್ದಾಣದಲ್ಲಿ ಡಿಜಿ ಲಾಕರ್ ಸೌಲಭ್ಯ – vishwanews24

ಉಡುಪಿ ರೈಲ್ವೆ ನಿಲ್ದಾಣದಲ್ಲಿ ಡಿಜಿ ಲಾಕರ್ ಸೌಲಭ್ಯ

ಉಡುಪಿ: ಕೊಂಕಣ ರೈಲ್ವೆಯು ಉಡುಪಿ, ಥೀವಿಂ ಹಾಗೂ ರತ್ನಗಿರಿ ರೈಲ್ವೆ ನಿಲ್ದಾಣಗಳಲ್ಲಿ ಡಿಜಿ ಲಾಕರ್ ಸೌಲಭ್ಯವನ್ನು ಕಲ್ಪಿಸಿದ್ದು, ಅದೀಗ ಪ್ರಯಾಣಿಕರಿಗೆ ಲಭ್ಯವಿದೆ. ಪ್ರಯಾಣಿಕರ ಲಗ್ಗೇಜ್ಗಳ ಸುರಕ್ಷತೆ, ಭದ್ರತೆ ಹಾಗೂ ಅವರ ಆತಂಕವನ್ನು ಇದು ನಿವಾರಿಸಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಡಿಜಿ ಲಾಕರ್ ಸೌಲಭ್ಯದ ಮೂಲಕ ಆಧುನಿಕ, ಸುರಕ್ಷಿತ ಹಾಗೂ ತಾವೇ ಕಾರ್ಯಾಚರಿಸುವ ಅವಕಾಶವೂ ಪ್ರಯಾಣಿಕರಿಗೆ ಸಿಗುವ ಮೂಲಕ ಅವರ ಲಗ್ಗೇಜ್ಗಳನ್ನು ಸುರಕ್ಷಿತವಾಗಿರಿಸುವ ಸಮಸ್ಯೆ ಬಗೆಹರಿಯಲಿದೆ ಎಂದು ಅದು ಹೇಳಿದೆ.

ಪ್ರಯಾಣಿಕರು ಯುಪಿಐ ಬಳಸಿ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ನಿಂದ ಕ್ಯೂಆರ್ ಕೋಡ್ ಆಧಾರಿತ ಡಿಜಿಟಲ್ ಪೇಮೆಂಟ್ ವ್ಯವಸ್ಥೆಯ ಮೂಲಕ ಸುರಕ್ಷಿತವಾದ ಈ ಸೇವೆಯನ್ನು ಪಡೆದುಕೊಳ್ಳಬಹುದು. ಈ ಸೇವೆ ದಿನದ 24 ಗಂಟೆಯೂ ರೈಲ್ವೆ ನಿಲ್ದಾಣದಲ್ಲಿ ಲಭ್ಯವಿರುತ್ತದೆ.

ನಿಗದಿತ ಶುಲ್ಕ ಪಾವತಿಸಿ ತಾವೇ ಕಾರ್ಯಾಚರಿಸುವ ಡಿಜಿ ಲಾಕರ್ ಸೌಲಭ್ಯವನ್ನು ದಿನದ ಯಾವುದೇ ಸಮಯದಲ್ಲಿ, ಬೇಕಾದ ಅವಧಿಗೆ ಪಡೆದುಕೊಳ್ಳಬಹುದು. ಯುಪಿಐ ಬಳಸಿ ಡಿಜಿಟಲ್ ಪೇಮೆಂಟ್ ಮೂಲಕ ಸೇವೆ ಪಡೆದು ತಮ್ಮ ಸಾಮಾನು ಸರಂಜಾಮುಗಳನ್ನು ಸುರಕ್ಷಿತವಾಗಿರಿಸಿ ತಮ್ಮ ಕೆಲಸ ಮುಗಿಸಿಕೊಂಡು ಬಂದು ಅವುಗಳನ್ನು ಕೊಂಡೊಯ್ಯಬಹುದು ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

10 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

11 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

11 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

11 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

11 hours ago