ಉಡುಪಿ, : ಭಾರತೀಯ ಭೂಸೇನೆಯ ಹಿರಿಯ ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್ ಎಲ್ ಡಾಯಸ್ ಅವರು ಬುಧವಾರ ತಡ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿದ್ದು ಪತ್ನಿ, ನಾಲ್ವರು ಪುತ್ರಿ, ಓರ್ವ ಪುತ್ರ ಹಾಗು ಅಪಾರ ಬಂದು ಮಿತ್ರರನ್ನು ಅಗಲಿರುತ್ತಾರೆ. ಅವರ ಅಂತಿಮ ಸಂಸ್ಕಾರ ಭಾನುವಾರ ಮದ್ಯಾಹ್ನ 3.30 ಗಂಟೆಗೆ ಮಣಿಪಾಲ ಕ್ರೈಸ್ಟ್ ಚರ್ಚ್ ನಲ್ಲಿ ನಡೆಯಲಿದೆ.
ಕಳೆದ ಎರಡು ದಶಕಗಳಿಂದ ಆರ್ ಎಲ್ ಡಾಯಸ್ ರವರು ಉಡುಪಿ ರೈಲ್ವೆ ಯಾತ್ರಿ ಸಂಘದ ಪದಾಧಿಕಾರಿ ಹಾಗು ಅಧ್ಯಕ್ಷರಾಗಿದ್ದು ಉಡುಪಿ ಭಾಗದ ರೈಲ್ವೆ ಸೇರಿದಂತೆ ನೈಋತ್ಯ ರೈಲ್ವೆ, ದಕ್ಷಿಣ ರೈಲ್ವೆ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಿ ಕೆಲಸ ಮಾಡಿಸುವಲ್ಲಿ ಯಶಸ್ಸು ಕಂಡಿದ್ದರು. ಉಡುಪಿ ರೈಲ್ವೆ ಯಾತ್ರಿ ಸಂಘದ ನೇತೃತ್ವದಲ್ಲಿ ಸಂಘಟಿತ ಹೋರಾಟದಿಂದ ಉಡುಪಿ ಭಾಗದಲ್ಲಿ ಹಲವಾರು ರೈಲ್ವೆ ಯೋಜನೆಗಳು ಜಾರಿ ಗೊಳ್ಳಲು ಅವರು ಮಹತ್ವಪೂರ್ಣ ಪಾತ್ರ ವಹಿಸಿದ್ದರು.
ಇದನ್ನೂ ಓದಿ : ಕುಂಭಮೇಳದಲ್ಲಿ ಭಾಗವಹಿಸಲು ಆಗಮಿಸುವಂತಹ ಭಕ್ತರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ -Vishwanews24
ರೈಲ್ವೆ ಸಂಬಂದಿತ ಹೋರಾಟಗಳ ಹೊರತಾಗಿ ಇತರ ಕ್ಷೇತ್ರಗಳಲ್ಲೂ ಡಾಯಸ್ ರವರ ಸಾಮಾಜಿಕ ಕಳಕಳಿ ನಿರಂತರವಾಗಿದ್ದು ಪರ್ಕಳ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಸ್ಪಂದನೆ, ಉಡುಪಿಯಲ್ಲಿ ನರ್ಮ್ ಬಸ್ ಓಡಾಟದ ಹಿಂದೆ ಅವರ ಪಾತ್ರ, ಈಗ ಚಾಲನೆಯಲ್ಲಿರುವ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗೆ ಅವರು ನಡೆಸಿದ ಹೋರಾಟಗಳು ಇತ್ಯಾದಿ ಜನ ಮಾನಸದಲ್ಲಿ ನೆಲೆಯೂರಿದೆ.
ಡಯಾಸ್‌ರ ನಿಧನಕ್ಕೆ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಕೆ.ರಘುಪತಿ ಭಟ್, ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ವಸಾಹಿ ಮುಂಬೈ ರೈಲ್ವೆಯಾತ್ರಿ ಸಂಘದ ಕಾರ್ಯಕಾರಿ ಕಾರ್ಯದರ್ಶಿ ಒಲಿವರ್ ಡಿಸೋಜ, ಉಡುಪಿ ರೈಲ್ವೆ ಯಾತ್ರಿ ಸಂಘದ ಉಪಾಧ್ಯಕ್ಷ ಅಜಿತ್ ಶೆಣೈ, ಪ್ರ. ಕಾರ್ಯದರ್ಶಿ ಮಂಜುನಾಥ್ ಮಣಿಪಾಲ, ಸಂಘದ ನಿರ್ದೇಶಕರುಗಳು, ಸದಸ್ಯರುಗಳು, ಉಡುಪಿ ಕೊಂಕಣ್ ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಮಂಗಳೂರು ರೈಲ್ವೆಯ ಹಿರಿಯ ಅಧಿಕಾರಿ ಸುಧಾ ಕೃಷ್ಣಮೂರ್ತಿ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
ಇದನ್ನೂ ಓದಿ : ಉಡುಪಿ: ಸಂಚಾರ ಪೋಲಿಸರಿಂದ ಕಾನೂನು ಸುವ್ಯವಸ್ಥೆಯ ಜೊತೆಗೆ ಮಾಸ್ಕ್ ಜಾಗೃತಿ ಅಭಿಯಾನ -Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…