ಉಡುಪಿ: ಲಂಚಕ್ಕೆ ಬೇಡಿಕೆ – ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಎಸಿಬಿ ದಾಳಿ : ಮೂವರ ಬಂಧನ – Vishwanews24
ಉಡುಪಿ: ಲಂಚಕ್ಕೆ ಬೇಡಿಕೆ – ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಎಸಿಬಿ ದಾಳಿ : ಮೂವರ ಬಂಧನ – Vishwanews24
ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಗುರುವಾರ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ವಾಣಿಜ್ಯ ಉದ್ದೇಶಕ್ಕೆ ಪರವಾನಿಗೆ ಕೊಡುವ ವಿಚಾರಕ್ಕೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಹಾಗೂ ಇಬ್ಬರು ಪ್ರಾಧಿಕಾರ ಅಧಿಕಾರಿ ಬಂಧಿಸಿದ್ದಾರೆ.
ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಗುರುಪ್ರಸಾದ್, ಪ್ರಾಧಿಕಾರ ಅಧಿಕಾರಿಗಳಾದ ನಯಿಮಾ ಸಯೀದ್ ಹಾಗೂ ಪ್ರಸಾದ್ ಇವರನ್ನು ಭ್ರಷ್ಟಾಚಾರ ನಿಗ್ರಹ ದಳ ವಶಕ್ಕೆ ಪಡೆದುಕೊಂಡಿದೆ.
ನಗರದ ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ, ಎಸಿಬಿ ಎಸ್.ಪಿ ಸೈಮನ್, ಡಿವೈಎಸ್ ಪಿ ಮಂಜುನಾಥ ಕವರಿ ನೇತೃತ್ವದಲ್ಲಿ ಎಸಿಬಿ ಎಸ್ ಐ ಸತೀಶ್, ರಫೀಕ್ ಎಂ ಈ ದಾಳಿ ನಡೆದಿದೆ. ಇದೇ ವೇಳೆ ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಗುರುಪ್ರಸಾದ್ ಅವರಿಂದ 2.50 ಲಕ್ಷ ರೂ. ವಶಕ್ಕೆ ಪಡೆದಿದೆ.
