ಉಡುಪಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿರುವುದು ಬಿಜೆಪಿಗರ ಅಶ್ಲೀಲ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಮೀನುಗಾರಿಕಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ನವೀನ್ ಸಾಲ್ಯಾನ್ ಹೇಳಿದ್ದಾರೆ.
ಒರ್ವ ಜವಾಬ್ದಾರಿಯುತ ಪರಿಷತ್ ಸದಸ್ಯರಾಗಿ ವರ್ತಿಸಬೇಕಿದ್ದ ಬಿಜೆಪಿ ಸದಸ್ಯ ಸಿ ಟಿ ರವಿ ಅವರು ಒರ್ವ ಮಹಿಳಾ ಸಚಿವರಿಗೆ ಅಶ್ಲೀಲ ಪದ ಬಳಸಿರುವುದಕ್ಕೆ ಈಗಾಗಲೇ ಪ್ರಕರಣ ದಾಖಲಾಗಿದೆ ಮುಂದುವರಿದು ಸಿ ಟಿ ರವಿ ಅವರ ಪರಿಷತ್ ಸದಸ್ಯತ್ವವನ್ನು ರದ್ದುಗೊಳಿಸಬೇಕು. ಮುಂದಿನ ದಿನಗಳಲ್ಲಿ ಬೇರೆ ಯಾರೂ ಕೂಡ ಇಂತಹ ಅಸಂವಿಧಾನಿಕ ವರ್ತನೆ ತೋರಿದ್ದಲ್ಲಿ ಇದೊಂದು ಪಾಠವಾಗಬೇಕು.
ಸಿಟಿ ರವಿಯವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಬಗ್ಗೆ ಮಾತನಾಡುವಾಗ ತನ್ನ ಮನೆಯಲ್ಲಿರುವ ತಾಯಿ ಕೂಡ ಒಂದು ಹೆಣ್ಣು ಎನ್ನುವುದನ್ನು ಮರೆತಿದ್ದಾರೆ ಅನಿಸುತ್ತದೆ. ತಮ್ಮ ಮನೆಯಲ್ಲಿ ಕೂಡ ಹೆಣ್ಣು ಮಕ್ಕಳು ಇದ್ದಾರೆ ಎನ್ನುವ ಕನಿಷ್ಠ ಜ್ಞಾನವೂ ಇಲ್ಲದ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಅದು ಕ್ರಿಮಿನಲ್ ಅಪರಾಧವಾಗಿದೆ. ನಿಟ್ಟಿನಲ್ಲಿ ಸರಕಾರ ಹಾಗೂ ಪೊಲೀಸ್ ಇಲಾಖೆ ಅವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಂಡು ಗರಿಷ್ಠ ಪ್ರಮಾಣದ ಶಿಕ್ಷೆ ನೀಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…