Featured

ಉಡುಪಿ : ಲಕ್ಷ್ಮೀ ಹೆಬ್ಬಾಳ್ಳರ್ ಗೆ ಅಶ್ಲೀಲ ಪದ ಬಳಕೆ ಮಾಡಿರುವುದು ಬಿಜೆಪಿಗರ ಅಶ್ಲೀಲ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿದೆ  : ನವೀನ್ ಸಾಲ್ಯಾನ್ – vishwanews24

ಲಕ್ಷ್ಮೀ ಹೆಬ್ಬಾಳ್ಳರ್ ಗೆ ಅಶ್ಲೀಲ ಪದ ಬಳಕೆ ಮಾಡಿರುವುದು ಬಿಜೆಪಿಗರ ಅಶ್ಲೀಲ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿದೆ  : ನವೀನ್ ಸಾಲ್ಯಾನ್

ಉಡುಪಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿರುವುದು ಬಿಜೆಪಿಗರ ಅಶ್ಲೀಲ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಮೀನುಗಾರಿಕಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ನವೀನ್ ಸಾಲ್ಯಾನ್ ಹೇಳಿದ್ದಾರೆ.

 

ಒರ್ವ ಜವಾಬ್ದಾರಿಯುತ ಪರಿಷತ್ ಸದಸ್ಯರಾಗಿ ವರ್ತಿಸಬೇಕಿದ್ದ ಬಿಜೆಪಿ ಸದಸ್ಯ ಸಿ ಟಿ ರವಿ ಅವರು ಒರ್ವ ಮಹಿಳಾ ಸಚಿವರಿಗೆ ಅಶ್ಲೀಲ ಪದ ಬಳಸಿರುವುದಕ್ಕೆ ಈಗಾಗಲೇ ಪ್ರಕರಣ ದಾಖಲಾಗಿದೆ ಮುಂದುವರಿದು ಸಿ ಟಿ ರವಿ ಅವರ ಪರಿಷತ್‌ ಸದಸ್ಯತ್ವವನ್ನು ರದ್ದುಗೊಳಿಸಬೇಕು. ಮುಂದಿನ ದಿನಗಳಲ್ಲಿ ಬೇರೆ ಯಾರೂ ಕೂಡ ಇಂತಹ ಅಸಂವಿಧಾನಿಕ ವರ್ತನೆ ತೋರಿದ್ದಲ್ಲಿ ಇದೊಂದು ಪಾಠವಾಗಬೇಕು.

ಸಿಟಿ ರವಿಯವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಬಗ್ಗೆ ಮಾತನಾಡುವಾಗ ತನ್ನ ಮನೆಯಲ್ಲಿರುವ ತಾಯಿ ಕೂಡ ಒಂದು ಹೆಣ್ಣು ಎನ್ನುವುದನ್ನು ಮರೆತಿದ್ದಾರೆ ಅನಿಸುತ್ತದೆ. ತಮ್ಮ ಮನೆಯಲ್ಲಿ ಕೂಡ ಹೆಣ್ಣು ಮಕ್ಕಳು ಇದ್ದಾರೆ ಎನ್ನುವ ಕನಿಷ್ಠ ಜ್ಞಾನವೂ ಇಲ್ಲದ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಅದು ಕ್ರಿಮಿನಲ್ ಅಪರಾಧವಾಗಿದೆ. ನಿಟ್ಟಿನಲ್ಲಿ ಸರಕಾರ ಹಾಗೂ ಪೊಲೀಸ್‌ ಇಲಾಖೆ ಅವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಂಡು ಗರಿಷ್ಠ ಪ್ರಮಾಣದ ಶಿಕ್ಷೆ ನೀಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

17 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

17 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

17 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

20 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

20 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

21 hours ago