ಉಡುಪಿ : ಕೋವಿಡ್‌ಗೆ ನಾವೆಲ್ಲ ಹೆದರಬೇಕಾಗಿಲ್ಲ. ಮಾರ್ಚ್ ಎಪ್ರಿಲ್ ವರೆಗೆ ಮಾತ್ರ ಇರುತ್ತದೆ. ಒಂದು ಮಟ್ಟಕ್ಕೆ ತಲುಪಿದ ನಂತರ ಅದರ ಸಂಖ್ಯೆ ಇಳಿಮುಖವಾಗುತ್ತದೆ. ಲಾಕ್‌ಡೌನ್‌ನಿಂದ ಒಮ್ಮೇಗೆ ಕೊರೋನ ಸಂಖ್ಯೆ ಏರಿಕೆಯಾಗುವುದನ್ನು ಕಡಿಮೆ ಮಾಡುತ್ತದೆ. ಆದರೆ ಲಾಕ್‌ಡೌನ್ ಮಾಡುವುದು ಬೇಡ ಹಾಗೂ ಆ ಬಗ್ಗೆ ನಮಗೆ ಯಾರಿಗೂ ಒಲವು ಇಲ್ಲ.
ಲಾಕ್‌ಡೌನ್, ನೈಟ್ ಕರ್ಫ್ಯೂನಿಂದ ಯಾವುದೇ ಪ್ರಯೋಜನ ಕೂಡ ಇಲ್ಲ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ನಡೆದ ವಿದ್ಯಾರ್ಥಿಗಳ ಲಸಿಕಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೈಟ್ ಕರ್ಫ್ಯೂ ಈಗ ಅವಶ್ಯಕತೆ ಇಲ್ಲ. ಹೊಸ ವರ್ಷ ಆಚರಣೆಯಲ್ಲಿ ಗೊಂದಲ ಆಗಬಹುದೆಂಬ ಉದ್ದೇಶದಿಂದ ನೈಟ್ ಕರ್ಫ್ಯೂ ಜಾರಿಗೆ ತರಲಾಗಿದೆ. ನೈಟ್ ಕರ್ಫ್ಯೂನಿಂದ ಕೊರೋನ ತಡೆಯುತ್ತದೆ ಎಂಬುದನ್ನು ನಾನು ಒಪ್ಪಲ್ಲ ಎಂದು ಹೇಳಿದರು.
ನೈಟ್ ಕರ್ಫ್ಯೂ ಇದ್ದರೆ ಜನರಿಗೆ ಕೊರೋನ ಈಗಲೂ ಇದೆ ಎಂಬುದು ಅರ್ಥ ಆಗುತ್ತದೆ. ಇಲ್ಲದಿದ್ದರೆ ಕೊರೋನವೇ ಇಲ್ಲ ಎಂದು ಹೇಳಿ ಮಾಸ್ಕ್ ಹಾಕದೆ, ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ನಡೆಸುತ್ತಿರುತ್ತಾರೆ. ಜನರಿಗೆ ಎಚ್ಚರಿಕೆ ಇರಲಿ ಎಂಬ ಕಾರಣಕ್ಕೆ ತಜ್ಞರು ಇಂತಹ ಕ್ರಮಗಳ ಬಗ್ಗೆ ನಿರ್ದೇಶನ ನೀಡುತ್ತಿದ್ದಾರೆ. ನನ್ನ ಪ್ರಕಾರ ಸರಕಾರ ಮುಂದೆ ಲಾಕ್ ಡೌನ್ ಮಾಡಲಿಕ್ಕೆ ಇಲ್ಲ. ಕೊರೋನ ಸಂಖ್ಯೆ ತುಂಬಾ ಜಾಸ್ತಿಯಾದರೆ ಮಾಡಬಹುದು. ಆದರೆ ನನ್ನ ಅಭಿಪ್ರಾಯ ಲಾಕ್ ಡೌನ್ ಮಾಡುವುದು ಬೇಡ ಎಂದರು.
ಎರಡು ಡೋಸ್ ಪಡೆದ ಪ್ರಮಾಣ ಪತ್ರ ಇರುವವರು ಮಾತ್ರ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ಇದನ್ನು ಆಮಂತ್ರಣ ಪತ್ರಿಕೆಯಲ್ಲಿಯೇ ನಮೂದಿಸಲಾಗಿದೆ. ಸರಕಾರದ ನಿರ್ದೇಶನದ ಪ್ರಕಾರವೇ ಪರ್ಯಾಯ ಮಹೋತ್ಸವವನ್ನು ನಡೆಸಲಾಗುವುದು. ಈ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳು ಈಗಾಗಲೇ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದರು.
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…