Featured

ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ;  ಇಬ್ಬರ ಬಂಧನ, ಸಂತ್ರಸ್ಥೆಯ ರಕ್ಷಣೆ – Vishwanews24

ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ; ಇಬ್ಬರ ಬಂಧನ, ಸಂತ್ರಸ್ಥೆಯ ರಕ್ಷಣೆ

ಉಡುಪಿ: ನಗರದ ಕೆಎಸ್ ಆರ್‌ ಟಿಸಿ ಬಸ್‌ ನಿಲ್ದಾಣ ಸಮೀಪ ಶಾಂಭವಿ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯನ್ನು ಉಡುಪಿ ನಗರ ಮಹಿಳಾ ಠಾಣಾ ಪೊಲೀಸರು ಬೇಧಿಸಿದ್ದು ಇಬ್ಬರನ್ನು ಬಂಧಿಸಿ ಸಂತ್ರಸ್ಥೆಯನ್ನು ರಕ್ಷಣೆಯ ಮಾಡಿದ್ದಾರೆ.

ಬಂಧಿತರನ್ನು ಎರ್ಮಾಳ್ ನಿವಾಸಿ ಜಯಂತ್ ಸಾಲಿಯಾನ್ (46) ಮತ್ತು ಹೆಬ್ರಿ ನಾಡ್ಪಾಲು ನಿವಾಸಿ ದಿನೇಶ್ (42) ಎಂದು ಗುರುತಿಸಲಾಗಿದೆ.

ಬುಧವಾರ ಮಧ್ಯಾಹ್ನ 1 ಗಂಟೆಗೆ ಉಡುಪಿ ಹಳೆ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇರುವ ಶಾಂಭವಿ ಹೋಟೇಲ್ ನಲ್ಲಿ ವೇಶ್ಯಾವಾಟಿಕೆಯನ್ನು ಜಯಂತ್ ಸಾಲಿಯಾನ್ ಮತ್ತು ದಿನೇಶ್ ಎಸ್ ಇವರನ್ನು ದಸ್ತಗಿರಿ ಮಾಡಿ, ಕೃತ್ಯಕ್ಕೆ ಸಂಬಂದಿಸಿದ 4 ಮೊಬೈಲ್ ಪೋನ್ , 5,600 /- ರೂಪಾಯಿ ನಗದು, ಹಾಗೂ ಇತರೆ ಸಾಕ್ಷ್ಯ ಸ್ವತ್ತು ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಶೇಖರ್, ಜಯಂತ್ ಮತ್ತು ದಿನೇಶ್ ಇವರು ಸೇರಿಕೊಂಡು ನೊಂದ ಮಹಿಳೆಯನ್ನು ಲಾಡ್ಜ್ ನ ರೂಮಿನಲ್ಲಿರಿಸಿ ಗಿರಾಕಿಗಳಿಗೆ ಹಣಕ್ಕೆ ಒದಗಿಸಿ ಅಕ್ರಮವಾಗಿ ವೇಶ್ಯವಾಟಿಕೆ ನಡೆಸಿ ವೇಶ್ಯಾವಾಟಿಕೆ ಯಿಂದ ಗಳಿಸದ ಹಣದಿಂದ ಜೀವನ ನಡೆಸುತ್ತಿರುವುದು ಹಾಗೂ ಎಲ್ಲಾ ಆರೋಪಿತರು ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

1 hour ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

1 hour ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

1 hour ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

1 hour ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

2 hours ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

2 hours ago