ಉಡುಪಿ: ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪ ಶಾಂಭವಿ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯನ್ನು ಉಡುಪಿ ನಗರ ಮಹಿಳಾ ಠಾಣಾ ಪೊಲೀಸರು ಬೇಧಿಸಿದ್ದು ಇಬ್ಬರನ್ನು ಬಂಧಿಸಿ ಸಂತ್ರಸ್ಥೆಯನ್ನು ರಕ್ಷಣೆಯ ಮಾಡಿದ್ದಾರೆ.
ಬಂಧಿತರನ್ನು ಎರ್ಮಾಳ್ ನಿವಾಸಿ ಜಯಂತ್ ಸಾಲಿಯಾನ್ (46) ಮತ್ತು ಹೆಬ್ರಿ ನಾಡ್ಪಾಲು ನಿವಾಸಿ ದಿನೇಶ್ (42) ಎಂದು ಗುರುತಿಸಲಾಗಿದೆ.
ಬುಧವಾರ ಮಧ್ಯಾಹ್ನ 1 ಗಂಟೆಗೆ ಉಡುಪಿ ಹಳೆ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇರುವ ಶಾಂಭವಿ ಹೋಟೇಲ್ ನಲ್ಲಿ ವೇಶ್ಯಾವಾಟಿಕೆಯನ್ನು ಜಯಂತ್ ಸಾಲಿಯಾನ್ ಮತ್ತು ದಿನೇಶ್ ಎಸ್ ಇವರನ್ನು ದಸ್ತಗಿರಿ ಮಾಡಿ, ಕೃತ್ಯಕ್ಕೆ ಸಂಬಂದಿಸಿದ 4 ಮೊಬೈಲ್ ಪೋನ್ , 5,600 /- ರೂಪಾಯಿ ನಗದು, ಹಾಗೂ ಇತರೆ ಸಾಕ್ಷ್ಯ ಸ್ವತ್ತು ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಶೇಖರ್, ಜಯಂತ್ ಮತ್ತು ದಿನೇಶ್ ಇವರು ಸೇರಿಕೊಂಡು ನೊಂದ ಮಹಿಳೆಯನ್ನು ಲಾಡ್ಜ್ ನ ರೂಮಿನಲ್ಲಿರಿಸಿ ಗಿರಾಕಿಗಳಿಗೆ ಹಣಕ್ಕೆ ಒದಗಿಸಿ ಅಕ್ರಮವಾಗಿ ವೇಶ್ಯವಾಟಿಕೆ ನಡೆಸಿ ವೇಶ್ಯಾವಾಟಿಕೆ ಯಿಂದ ಗಳಿಸದ ಹಣದಿಂದ ಜೀವನ ನಡೆಸುತ್ತಿರುವುದು ಹಾಗೂ ಎಲ್ಲಾ ಆರೋಪಿತರು ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…