ಉಡುಪಿ: ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾ0ಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ಜೆಂಡರ್ ಪರ್ಸನ್ಸ್ ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾ0ಶದಲ್ಲಿ ಮಾರ್ಪಾಡು ಮಾಡಲಾಗಿದೆ.
ಆದ್ದರಿಂದ ಜುಲೈ 8 ರಿಂದ ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್-ಜೆಂರ‍್ಸ್ ಗುರುತಿನ ಚೀಟಿ, ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಆಧಾರಕಾರ್ಡ್ ನ್ನು ಕಡ್ಡಾಯವಾಗಿ ನೀಡುವುದು ಅವಶ್ಯವಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…