Featured

ಉಡುಪಿ:  ಲೈಂಗಿಕ ದೌರ್ಜನ್ಯ – ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ – vishwanews24

ಉಡುಪಿ:  ಲೈಂಗಿಕ ದೌರ್ಜನ್ಯ – ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ; ಆರೋಪಿ ಪರಾರಿ

ಉಡುಪಿ :ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದೇಶದಲ್ಲಿ ಭಾರಿ ಸಂಚಾಲವನ್ನೇ ಮೂಡಿಸಿತ್ತು. ಈಗ ಇದೇ ಮಾದರಿ ಎನ್ನಲಾದ ಮತ್ತೊಂದು ಘಟನೆ ಉಡುಪಿಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.

ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್​ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ.

ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅತ್ಯಾಚಾರದ ದೃಶ್ಯ ಸೆರೆ ಹಿಡಿದು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿ ವಿರುದ್ಧ ಮೇ 18 ರಂದು ಪೋಕ್ಸೋ ಪ್ರಕರಣ ದಾಖಲಾಗಿದೆ. ದೂರು ದಾಖಲಾದ ನಂತರ ಶ್ರೇಯಸ್ ನಾಪತ್ತೆಯಾಗಿದ್ದಾನೆ .ಆರೋಪಿ ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಹುಡುಕಾಡಲಾಗುತ್ತಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

11 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago