ಉಡುಪಿ : “ಲೋಕಸಭಾ ಚುನಾವಣೆಯಲ್ಲಿ ನಾನು ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ಪರ್ಧೆ ನಡೆಸಬೇಕು ಎನ್ನುವ ಆಸೆ ಕಾರ್ಯಕರ್ತರು ಮತ್ತು ನಾಯಕರಿಗೆ ಇದೆ, ಈ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ. ಫೆಬ್ರವರಿ ಅಂತ್ಯದ ಒಳಗೆ ಅಭ್ಯರ್ಥಿ ಪಟ್ಟಿ ಬಿಡುಗಡೆ ಆಗಲಿದೆ” ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದ್ದಾರೆ.
ಉಡುಪಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು “ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಕಾಂಗ್ರೆಸ್ ಗೆಲ್ಲಲು ಸಾಧ್ಯವಿದೆ. ದ.ಕದಲ್ಲಿ ಪ್ರಸ್ತುತ ಇರುವ ಲೋಕಸಭಾ ಸದಸ್ಯರ ವಿಫಲತೆಗಳು ಹಲವಾರು ಇವೆ. ನಾನು ಈ ಹಿಂದೆ ಲೊಕಸಭಾ ಸದಸ್ಯನಾಗಿದ್ದಾಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಪ್ರತಿನಿಧಿಸಿದ್ದೆ. ನಾನು ಮೂಲತಃ ಪುತ್ತೂರಿನವನು ಹಾಗೂ ಅಲ್ಲಿಯೇ ಎರಡು ಸಲ ಶಾಸಕನಾಗಿ ಕೂಡಾ ಕಾರ್ಯನಿರ್ವಹಿಸಿದ್ದೆ. ಆ ಜಿಲ್ಲೆಯಲ್ಲಿಯೂ ಕೂಡಾ ನಮಗೆ ಸಂಪರ್ಕ ಇದೆ. ಅಂತಿಮವಾಗಿ ಹೈಕಮಾಂಡ ಸರ್ವೆ ನಡೆಸಿ, ಸ್ಕ್ರಿನಿಂಗ್ ಕಮಿಟಿ ಸಭೆ ನಡೆಸಿ ನಿರ್ಧಾರ ಮಾಡುತ್ತಾರೆ. ಯಾರ ಹೆಸರು ಅಂತಿಮವಾಗಿಲ್ಲ. ಎಐಸಿಸಿ, ಕೆಪಿಸಿಸಿ ಸರ್ವೆ ನಡೆಸಿ ನಾಯಕರ ಅಭಿಪ್ರಾಯ ಸಂಗ್ರಹ ಕೂಡಾ ನಡೆಯಲಿದೆ. ಎರಡೂ ಜಿಲ್ಲೆಯಲ್ಲಿ ಕೆಲಸ ಮಾಡಿರುವ ಅನುಭವ ಇದೆ. ಕಾರ್ಯಕರ್ತರು, ಪಕ್ಷದ ಮುಖಂಡರು ಪ್ರೀತಿಯಿಂದ ನನ್ನ ಹೆಸರನ್ನು ಪ್ರಸ್ತಾಪ ಮಾಡಿರಬಹುದು, ಇದು ನಾವು ಸಂಪಾದನೆ ಮಾಡಿರುವ ಆಸ್ತಿ” ಎಂದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…