Featured

ಉಡುಪಿ: ವಂದೇ ಭಾರತ್ ಮಂಗಳೂರು- ಮಡಗಾಂವ್ ಎಕ್ಸ್‌ಪ್ರೆಸ್ ರೈಲಿಗೆ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಭವ್ಯ ಸ್ವಾಗತ – vishwanews24

ಉಡುಪಿ: ವಂದೇ ಭಾರತ್ ಮಂಗಳೂರು- ಮಡಗಾಂವ್ ಎಕ್ಸ್‌ಪ್ರೆಸ್ ರೈಲಿಗೆ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಭವ್ಯ ಸ್ವಾಗತ

 

ಉಡುಪಿ: ವಂದೇ ಭಾರತ್ ಮಂಗಳೂರು- ಮಡಗಾಂವ್ ಎಕ್ಸ್‌ಪ್ರೆಸ್ ರೈಲಿಗೆ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ವಂದೇ ಭಾರತ್ ರೈಲನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಮಂಗಳೂರಿನಿಂದ ಹೊರಟ ರೈಲು ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ನೂರಾರು ಜನರು ಹೂವಿನ ಸುರಿಮಳೆಗೈದರು. ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿ ಅವರಿಗೆ ಜೈಕಾರ ಹಾಕಿದರು.

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಕುಮಾರ್, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಹಾಗೂ ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಅರುಣ್ ಕುಮಾರ್ ಉಪಸ್ಥಿತರಿದ್ದರು.

ಉಡುಪಿ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿಯನ್ನು ಪಿಆರ್‌ಓ ಸುಧಾ ಕೃಷ್ಣಮೂರ್ತಿ ವಹಿಸಿದ್ದರು.

Vishwa News 24

Recent Posts

ಕುಂಜಾರುಗಿರಿ: ವ್ಯಕ್ತಿಯ ದರೋಡೆ ಪ್ರಕರಣ ;  ಆರೋಪಿ ಬಂಧನ -vishwanews24

ಕುಂಜಾರುಗಿರಿ: ವ್ಯಕ್ತಿಯ ದರೋಡೆ ಪ್ರಕರಣ ;  ಆರೋಪಿ ಬಂಧನ ಉಡುಪಿ: ಕುರ್ಕಾಲು ಗ್ರಾಮದ ಕುಂಜಾರುಗಿರಿ ದುರ್ಗಾದೇವಿ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮಕ್ಕೆ…

16 minutes ago

ಕಾಪು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ -vishwanews24

ಕಾಪು ಬೀಚ್‌ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ.. ಉಡುಪಿ: ಕಾಪು ಬೀಚ್‌ನಲ್ಲಿ…

2 days ago

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…

3 days ago

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

5 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

7 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

7 days ago