ಉಡುಪಿ: ವಂದೇ ಭಾರತ್ ಮಂಗಳೂರು- ಮಡಗಾಂವ್ ಎಕ್ಸ್‌ಪ್ರೆಸ್ ರೈಲಿಗೆ ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು.
ವಂದೇ ಭಾರತ್ ರೈಲನ್ನು ಕಣ್ತುಂಬಿಕೊಳ್ಳಲು ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಮಂಗಳೂರಿನಿಂದ ಹೊರಟ ರೈಲು ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ನೂರಾರು ಜನರು ಹೂವಿನ ಸುರಿಮಳೆಗೈದರು. ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿ ಅವರಿಗೆ ಜೈಕಾರ ಹಾಕಿದರು.
ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಕುಮಾರ್, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಹಾಗೂ ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ಅರುಣ್ ಕುಮಾರ್ ಉಪಸ್ಥಿತರಿದ್ದರು.
ಉಡುಪಿ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿಯನ್ನು ಪಿಆರ್‌ಓ ಸುಧಾ ಕೃಷ್ಣಮೂರ್ತಿ ವಹಿಸಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…