ಉಡುಪಿ: ವಂದೇ ಭಾರತ್ ರೈಲನ್ನು ಕರಾವಳಿಗೆ ವಿಸ್ತರಣೆ ಸಹಿತ ಕೊಂಕಣ ರೈಲ್ವೇ ಹಳಿಗಳ ದ್ವಿಪಥ ಬಗ್ಗೆ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಮನವಿ ಸಲ್ಲಿಸಿದ್ದಾರೆ.
ಹೊಸದಿಲ್ಲಿಯ ಕಚೇರಿಯಲ್ಲಿ ಭೇಟಿ ಮಾಡಿದ ಸಂಸದರು, ವಂದೇ ಭಾರತ್ ರೈಲು ಬೆಂಗಳೂರಿನಿಂದ ಮಂಗಳೂರು, ಉಡುಪಿ, ಉತ್ತರಕನ್ನಡದವರೆಗೆ ವಿಸ್ತರಿ ಸಬೇಕಾದ ಅಗತ್ಯವನ್ನು ವಿವರಿಸಿದರು. ಪ್ರತೀ ದಿನ ಉತ್ತರಕನ್ನಡ, ಕುಂದಾಪುರ, ಉಡುಪಿ, ಮಂಗಳೂರಿನಿಂದ 600 ಕ್ಕೂ ಹೆಚ್ಚು ಬಸ್ ಗಳು ಮತ್ತು ಇತರ ಖಾಸಗಿ ವಾಹನಗಳು ರಾಜಧಾನಿ ಬೆಂಗಳೂರು ತಲುಪು ತ್ತಿದ್ದು, ನಿತ್ಯ ಪ್ರಯಾಣಿಕರಿಗೆ ಅನುಕೂಲವಾಗಲು ಕರಾವಳಿಗೆ ವಂದೇ ಭಾರತ್ ರೈಲು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ 👇
ಅದರೊಂದಿಗೆ, ಮಂಗಳೂರಿನಿಂದ ಮುಂಬಯಿ ವರೆಗಿನ ಕೊಂಕಣ ರೈಲ್ವೇಯ 734 ಕಿ.ಮೀ. ಹಳಿಗಳನ್ನು ದ್ವಿಪಥಗೊಳಿಸುವ ಮೂಲಕ ಹೆಚ್ಚುವರಿ ರೈಲ್ವೇ ಸಂಚಾರಕ್ಕೆ ಅವಕಾಶ ಮಾಡಿ ಕೊಡಲು ಸರ್ವೆ ನಡೆಸಿ ಹಣ ಬಿಡುಗಡೆ ಮಾಡಬೇಕು ಎಂದವರು ಮನವಿಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…