ಉಡುಪಿ: ವಯಸ್ಸಾದ್ರೂ ಸಿಎಂ ಯಡಿಯೂರಪ್ಪ ಜವಾಬ್ದಾರಿ ನಿರ್ವಹಿಸುವಲ್ಲಿ ಸಮರ್ಥರಿದ್ದಾರೆ. ಆರೋಗ್ಯವಾಗಿ ಇದ್ದವರಿಗೆ ವಯಸ್ಸು ಲೆಕ್ಕಕ್ಕೆ ಬರುವುದಿಲ್ಲ ಎಂದು ಉಡುಪಿ ಬಿಜೆಪಿ ಶಾಸಕ, ಸರಕಾರದ ಭರವಸೆಗಳ ಸಮಿತಿ ಅಧ್ಯಕ್ಷ ರಘುಪತಿ ಭಟ್ ಸಿಎಂಗೆ ಬೆಂಬಲವಾಗಿ ನಿಂತಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಸಿಎಂ ಉತ್ತಮ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಜನರ ಸಮಸ್ಯೆ ಆಲಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಶಾಸಕರ ಸಭೆ ನಡೆಸುತ್ತಾರೆ. ಜಿಲ್ಲಾ ಪ್ರವಾಸವನ್ನು ಮಾಡುತ್ತಿದ್ದಾರೆ. ಯಡಿಯೂರಪ್ಪ ಪರ- ವಿರೋಧ ಸಹಿಸಂಗ್ರಹ ಮಾಡಬಾರದು ಎಂಬ ಸೂಚನೆ ಬಂದಿದೆ. ನನ್ನ ಬಳಿ ಯಾರು ಸಹಿ ಕೇಳಿಲ್ಲ, ನಾನು ಸಹಿ ಹಾಕುವುದಿಲ್ಲ. ಪಕ್ಷದಲ್ಲಿ ಸಹಿಸಂಗ್ರಹ ಆಗಬಾರದು ಎಂದು ಹೈಕಮಾಂಡ್ ಸೂಚನೆ ಕೊಟ್ಟಿದೆ ಎಂದು ತಮ್ಮ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದಾರೆ.
ಶಾಸಕರನ್ನು ಕರೆದು ಅಭಿಪ್ರಾಯ ಕೇಳಲು ಅವಕಾಶ ಇದೆ, ಕೇಳಬಹುದು. ರಾಜ್ಯದಲ್ಲೇ ಯಾರೋ ಕೂತು ಸಹಿ ಸಂಗ್ರಹ ಮಾಡುವುದು ಸರಿಯಲ್ಲ. ಹೈಕಮಾಂಡ್ ಬೇಕಿದ್ದರೆ ಈ ಕೆಲಸ ಮಾಡಬಹುದು. ಸಿಎಂ ಬದಲಾಗುವ ಅನಿವಾರ್ಯತ ಇಲ್ಲ. ಸಿಎಂ ಬದಲಾವಣೆ ವಿಚಾರ ಎಲ್ಲಿಂದ ಸೃಷ್ಟಿಯಾಗಿದೆಯೋ ಗೊತ್ತಿಲ್ಲ. ಸಿಎಂ ಬದಲಾವಣೆ ಆಗಬೇಕಾದ ಅನಿವಾರ್ಯತೆ ನನಗೆ ಕಂಡುಬರುತ್ತಿಲ್ಲ. ಹೈಕಮಾಂಡ್‍ನ ವರಿಷ್ಠರ ಬಂದು ಶಾಸಕರ ಅಭಿಪ್ರಾಯ ಕೇಳಬಹುದು ಎಂದು ಹೇಳಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…