Featured

ಉಡುಪಿ : ವಸತಿ ಶಾಲೆಗಳಲ್ಲಿನ ಸೌಲಭ್ಯಗಳ ಕುರಿತು ಮಾಹಿತಿ ನೀಡಿ: ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ವಸತಿ ಶಾಲೆಗಳಲ್ಲಿನ ಸೌಲಭ್ಯಗಳ ಕುರಿತು ಮಾಹಿತಿ ನೀಡಿ: ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಜಿಲ್ಲೆಯಲ್ಲಿರುವ ವಸತಿಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳುವ ಕುರಿತಂತೆ , ವಸತಿ ಶಾಲೆಗಳಲ್ಲಿರುವ ವಿವಿಧ ಸೌಲಭ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಹೆಚ್ಚಿನ ಮಾಹಿತಿ ನೀಡುವಂತೆ , ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಜಿಲ್ಲಾದಿಕಾರಿ ಜಿ.ಜಗದೀಶ್ ಸೂಚಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , 6ನೇ ತರಗತಿ ಪ್ರವೇಶ ಪರೀಕ್ಷೆ ಹಾಗೂ ವಸತಿಶಾಲೆಗಳ ನಿರ್ವಹಣೆಗೆ ಸಂಬAಧಿಸಿದAತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ವಸತಿಶಾಲೆಗಳ ಪ್ರಾಂಶುಪಾಲರ, ನಿಲಯಪಾಲಕರ, ಕಂಪ್ಯೂಟರ್ ಶಿಕ್ಷಕರ , ಪ್ರಥಮ ದರ್ಜೆ ಸಹಾಯಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಸರಕಾರ ಉಡುಪಿ ಜಿಲ್ಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ನಡೆಸುತ್ತಿರುವ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾAಧಿ ವಸತಿಶಾಲೆಗಳ 6ನೇ ತರಗತಿ ದಾಖಲಾತಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿದ್ದು , ಉಡುಪಿ ಜಿಲ್ಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ವಸತಿಶಾಲೆಗಳ ಪ್ರಯೋಜನ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ವಸತಿಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ಸರಕಾರವು ಉಚಿತವಾಗಿ ಊಟ, ವಸತಿ, ಸಮವಸ್ತç, ಶೂ, ಪಠ್ಯಪುಸ್ತಕ, ನೋಟ್‌ಪುಸ್ತಕ ನೀಡುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಬೇರೆ ಜಿಲ್ಲೆಯ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದು ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುವ ಮೂಲಕ ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

6ನೇ ತರಗತಿಯ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾರ್ಗದರ್ಶನವನ್ನು ನೀಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ಬಗ್ಗೆ ಮಾಧ್ಯಮಗಳ ಮುಖಾಂತರ ಹಾಗೂ ಸಾಮಾಜಿಕ ಜಾಲತಾಣಗಳ ಮುಖಾಂತರ ವ್ಯಾಪಕ ಪ್ರಚಾರವನ್ನು ಕೈಗೊಳ್ಳುವಂತೆ ಸೂಚಿಸಿದರು.

ಕಾರ್ಕಳ ತಾಲೂಕಿನ ಮಿಯಾರು, ಕಾಪು ತಾಲೂಕಿನ ಕಳತ್ತೂರು, ಉಡುಪಿ ತಾಲೂಕಿನ ಹಿರೇಬೆಟ್ಟು, ಬ್ರಹ್ಮಾವರ ತಾಲೂಕಿನ ಆರೂರು, ಕುಂದಾಪುರ ತಾಲೂಕಿನ ಶಂಕರನಾರಾಯಣ, ಸಿದ್ದಾಪುರ, ಯಡ್ಯಾಡಿ-ಮತ್ಯಾಡಿ, ಬೈಂದೂರು ತಾಲೂಕಿನ ಹೆರಂಜಾಲು ವಸತಿಶಾಲೆಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ 16 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ .

ಸಭೆಯಲ್ಲಿ ಜಿಲ್ಲಾ ಪ್ರವೇಶ ಪರೀಕ್ಷಾಧಿಕಾರಿಗಳು ಹಾಗೂ ಸಮಾಜಕಲ್ಯಾಣ ಇಲಾಖೆಯ ಉಪನಿದೇಶಕರಾದ ಅನಿತಾ ಮಡ್ಲೂರ್, ಬಿ.ಸಿ.ಎಂ ಜಿಲ್ಲಾ ಮಟ್ಟದ ಅಧಿಕಾರಿಗಳಾದ ದೇವೆಂದ್ರ ಬಿರಾದಾರ್, ಐ.ಟಿ.ಡಿ.ಪಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ದೂದ್‌ಪೀರ್, ಡಿ.ಡಿ.ಪಿ.ಐ ಎನ್.ಎಚ್ ನಾಗೂರ್, ಡಯಟ್ ಪ್ರಾಂಶುಪಾಲರಾದ ವೇದಮೂರ್ತಿ ಹಾಗೂ ಜಿಲ್ಲಾ ಸಮನ್ವಯಾಧಿಕಾರಿ ಚಂದ್ರಶೇಖರ ಬಿ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

4 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

5 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

5 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

5 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

6 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

6 hours ago