Featured

ಉಡುಪಿ: ವಾಟ್ಸಾಪ್ ಆಡಿಯೋ ವೈರಲ್: ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ; ಮೂವರು ಆರೋಪಿಗಳ ಬಂಧನ – vishwanews24

ಉಡುಪಿ: ವಾಟ್ಸಾಪ್ ಆಡಿಯೋ ವೈರಲ್: ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ; ಮೂವರು ಆರೋಪಿಗಳ ಬಂಧನ

ಉಡುಪಿ: ಆಡಿಯೋವನ್ನು ವೈರಲ್ ಮಾಡಿದ ಕಾರಣಕ್ಕಾಗಿ ಸ್ನೇಹಿತರೇ ಸೇರಿ ವ್ಯಕ್ತಿಯೊಬ್ಬರನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆಗೈದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ಆ.12ರಂದು ರಾತ್ರಿ 11:30ರ ಸುಮಾರಿಗೆ ನಡೆದಿದೆ.

ಕೊಲೆಗೀಡಾದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ವಿನಯ್ ದೇವಾಡಿಗ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಗಳಾದ ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರ ನಿವಾಸಿಗಳಾದ ಅಜಿತ್(28), ಅಕ್ಷೇಂದ್ರ (34) ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಎಂಬವರು ಪೊಲೀಸರಿಗೆ ಶರಣಾಗಿದ್ದು ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ವಿನಯ್ ದೇವಾಡಿಗ, ಮಂಗಳವಾರ ವೈಯಕ್ತಿಕ ಕೆಲಸದ ನಿಮಿತ್ತ ಉಡುಪಿಗೆ ಹೋಗಿ ಸಂಜೆ 6 ಗಂಟೆಗೆ ಮನೆಗೆ ಬಂದು ಕೋಣೆಯಲ್ಲಿ ಮಲಗಿದ್ದರು.

ರಾತ್ರಿ ಮೂವರು ಆರೋಪಿಗಳು ಮನೆಯ ಒಳಗೆ ನುಗ್ಗಿ ಮನೆಯ ಎಲ್ಲಾ ಕಡೆಗಳಲ್ಲಿ ವಿನಯ್ ಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ಕೋಣೆಯಲ್ಲಿದ್ದ ವಿನಯ್ ಶಬ್ದದಿಂದ ಎಚ್ಚರಗೊಂಡಾಗ ಆರೋಪಿಗಳು ವಿನಯ್ ಬಳಿ ಇದ್ದ ಮೊಬೈಲ್ ನ್ನು ಕಿತ್ತುಕೊಳ್ಳಲು ಪ್ರಯತ್ನಪಟ್ಟರು. ನಂತರ ಅಜಿತ್, ವಿನಯ್ ನನ್ನು ತಪ್ಪಿಸಿಕೊಳ್ಳದಂತೆ ಗಟ್ಟಿಯಾಗಿ ಹಿಡಿದುಕೊಂಡ. ಆಕ್ಷೇಂದ್ರ ಹಾಗೂ ಪ್ರದೀಪ್ ಮಚ್ಚು ಹಾಗೂ ಚಾಕುವಿನಿಂದ ವಿನಯ್ ದೇವಾಡಿಗ ಅವರ ತಲೆಯನ್ನು ಕಡಿದು, ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಸ್ಕೂಟರ್ ನಲ್ಲಿ ಪರಾರಿಯಾದರು ಎಂದು ದೂರಲಾಗಿದೆ.

ಆರೋಪಿ ಅಕ್ಷೇಂದ್ರನಿಗೆ ಜೀವನ್ ಎಂಬಾತನು ಬೈದಿರುವ ಆಡಿಯೋವನ್ನು ವಿನಯ್ ದೇವಾಡಿಗ ಬೇರೆಯವರಿಗೆ ಶೇರ್ ಮಾಡಿ ವೈರಲ್ ಮಾಡಿರುವುದೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago