Featured

ಉಡುಪಿ : ವಾಣಿಜ್ಯ ಬಳಕೆ ಸಿಲಿಂಡರ್‌ ಅಭಾವ :  150ಕ್ಕೂ ಹೆಚ್ಚು ಹೊಟೇಲ್‌ ಬಂದ್‌ – vishwanews24

ಉಡುಪಿ : ವಾಣಿಜ್ಯ ಬಳಕೆ ಸಿಲಿಂಡರ್‌ ಅಭಾವ :  150ಕ್ಕೂ ಹೆಚ್ಚು ಹೊಟೇಲ್‌ ಬಂದ್‌

ಉಡುಪಿ : ವಾಣಿಜ್ಯ ಬಳಕೆಯ ಸಿಲಿಂಡರ್‌ ಅಭಾವದಿಂದಾಗಿ ಉಡುಪಿ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಹೊಟೇಲ್‌ಗ‌ಳು ಬಂದ್‌ ಆಗಿವೆ ಎಂದು ಜಿಲ್ಲಾ ಹೊಟೇಲ್‌ ಮಾಲಕರ ಸಂಘ ತಿಳಿಸಿದೆ.

ಕೆಲವು ದಿನಗಳಿಂದ ಹೊಟೇಲ್‌ಗ‌ಳಲ್ಲಿ ಕುಚ್ಚಲಕ್ಕಿ ಅನ್ನ, ದೋಸೆ ಸಹಿತ ಇತರ ತಿನಸುಗಳನ್ನು ಕೈಬಿಟ್ಟು ಹೊಟೇಲ್‌ ನಿರ್ವಹಣೆ ಮಾಡಲಾಗುತ್ತಿತ್ತು. ಆದರೆ ಈಗ 150ಕ್ಕೂ ಹೆಚ್ಚು ಹೊಟೇಲ್‌ಗ‌ಳಿಗೆ ಬೀಗ ಹಾಕಲಾಗಿದೆ. ಗ್ಯಾಸ್‌ ಪೂರೈಕೆ ಅಭಾವದಿಂದ ಅನಿವಾರ್ಯವಾಗಿ ಹೊಟೇಲ್‌ ಬಂದ್‌ ಮಾಡಲಾಗಿದೆ ಎಂಬ ಫಲಕವನ್ನೂ ಅಳವಡಿಸಲಾಗಿದೆ. ಬೇಡಿಕೆಗೆ ತಕ್ಕಂತೆ ಸಿಲಿಂಡರ್‌ ಪೂರೈಕೆಯಾದರಷ್ಟೇ ಹೊಟೇಲ್‌ ತೆರೆಯಬಹುದು ಎಂದು ಹೊಟೇಲ್‌ ಮಾಲಕರೊಬ್ಬರು ತಿಳಿಸಿದ್ದಾರೆ. ಕೆಲವು ಹೊಟೇಲ್‌ಗ‌ಳಲ್ಲಿ ಕಟ್ಟಿಗೆ ಬಳಸಿಕೊಂಡು ಅಡುಗೆ ಮಾಡಲಾಗುತ್ತದೆಯಾದರೂ ಈಗ ಕಾರ್ಮಿಕರ ಕೊರತೆಯಿಂದಾಗಿ ಅದಕ್ಕೂ ಸಮಸ್ಯೆ ಎದುರಾಗಿದೆ.

ಇದನ್ನೂ ಓದಿ :

ಸೌದೆ ಬೇಕು ಎನ್ನುವಷ್ಟು ಲಭ್ಯತೆಯೂ ಇಲ್ಲ. ನಗರ ಪ್ರದೇಶದಲ್ಲಿ ಸೌದೆ ಮಾರಾಟ ಮಾಡುವವರ ಸಂಖ್ಯೆ ತೀರ ಕಡಿಮೆಯಿದೆ. ಸೌದೆ ದುಬಾರಿ ಜತೆಗೆ ಕೊರತೆಯೂ ಇದೆ ಎನ್ನಲಾಗಿದೆ. 2 ವಾರದ ಹಿಂದೆ ದಿನಕ್ಕೆ 2ರಿಂದ 3 ಸಾವಿರ ರೂ. ಮೌಲ್ಯದ ಕಟ್ಟಿಗೆಗಳು ಮಾರಾಟವಾಗುತ್ತಿದ್ದವು. ಮುಖ್ಯವಾಗಿ ಹಾಲ್‌ಗ‌ಳು, ಮನೆಮಂದಿಯಷ್ಟೇ ಕೊಂಡುಹೋಗುತ್ತಿದ್ದರು. ಆದರೆ ಈಗ ಹೊಟೇಲ್‌ ಮಾಲಕರಿಂದಲೇ ಅಪಾರ ಪ್ರಮಾಣದ ಬೇಡಿಕೆ ವ್ಯಕ್ತವಾಗುತ್ತಿದೆ. ದಿನಕ್ಕೆ 10 ಸಾವಿರ ರೂ.ಗೂ ಅಧಿಕ ಮೌಲ್ಯದ ಕಟ್ಟಿಗೆಗಳು ಮಾರಾಟವಾಗುತ್ತಿವೆ. ಅದರಲ್ಲೂ ಈಗಾಗಲೇ ಮುಂಗಡವಾಗಿ ಟನ್‌ಗಟ್ಟಲೆ ಕಟ್ಟಿಗೆ ಬುಕಿಂಗ್‌ ಮಾಡಿದವರು ಇದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ :

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

9 hours ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

9 hours ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

9 hours ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

10 hours ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

10 hours ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

10 hours ago