ಉಡುಪಿ: ನಗರದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ವಾಣಿಜ್ಯ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಮೂಲತಃ ರಾಜಸ್ಥಾನದವರಾದ ಉದ್ಯಮಿ ಭೀಮಾ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ವಸ್ತುಗಳ ಗೋದಾಮಿನಲ್ಲಿ ಭಾನುವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಬೆಂಕಿ ಅವಘಡದಲ್ಲಿ ಅವರಿಗೆ ಸೇರಿದ ಪ್ಲಾಸ್ಟಿಕ್ ಮಳಿಗೆ ಮತ್ತು ಮೊಬೈಲ್ ಮಳಿಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅಲ್ಲದೆ, ಪಕ್ಕದ ಎರಡು-ಮೂರು ಅಂಗಡಿಗಳಿಗೂ ಹಾನಿಯಾಗಿದ್ದು, ಭಾರಿ ನಷ್ಟ ಸಂಭವಿಸಿದೆ.
ಇದನ್ನೂ ಓದಿ:
ಭಾನುವಾರ ಸಂಜೆ ಆರಂಭವಾದ ಅಗ್ನಿಶಾಮಕ ದಳದ ಕಾರ್ಯಾಚರಣೆಯು ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಮುಂದುವರೆದಿದೆ. ತಡರಾತ್ರಿ ಬೆಂಕಿಯನ್ನು ಹತೋಟಿಗೆ ತಂದಿದ್ದರೂ, ಗೋದಾಮು ಮತ್ತು ಕೆಳಗಿನ ಅಂಗಡಿಗಳಲ್ಲಿ ಬೆಂಕಿ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತಿತ್ತು. ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಈ ದುರಂತದಲ್ಲಿ ಒಂದೇ ಮಾಲೀಕರಿಗೆ ಸೇರಿದ ನಾಲ್ಕು ಮಳಿಗೆಗಳು ಸಂಪೂರ್ಣ ಭಸ್ಮವಾಗಿವೆ. ಈ ಆಘಾತದಿಂದಾಗಿ ಅಂಗಡಿ ಮಾಲೀಕ ಭೀಮಾ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ:
ಕೇವಲ ಸರಕು ಸಾಮಗ್ರಿಗಳು ಮಾತ್ರವಲ್ಲದೆ, ಬೆಂಕಿಯ ತೀವ್ರತೆಗೆ ಕಟ್ಟಡ ಮತ್ತು ಅದರ ಶಟರ್‌ಗಳಿಗೂ ತೀವ್ರ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…