Featured

ಉಡುಪಿ : ವಾದಗಳು ಆರ್ಭಟಗಳು ಸಮಸ್ಯೆಯನ್ನು ಪರಿಹಾರ ಮಾಡುವುದಿಲ್ಲ : ಕೋಟ  ಶ್ರೀನಿವಾಸ ಪೂಜಾರಿ – Vishwanews24

ಉಡುಪಿ : ವಾದಗಳು ಆರ್ಭಟಗಳು ಸಮಸ್ಯೆಯನ್ನು ಪರಿಹಾರ ಮಾಡುವುದಿಲ್ಲ : ಕೋಟ  ಶ್ರೀನಿವಾಸ ಪೂಜಾರಿ

ಉಡುಪಿ : ವಾದಗಳು ಆರ್ಭಟಗಳು ಸಮಸ್ಯೆಯನ್ನು ಪರಿಹಾರ ಮಾಡುವುದಿಲ್ಲ ಎಂದು ಸಿದ್ಧರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿರುಗೇಟು ನೀಡಿದ್ದಾರೆ.

ಇಂದು ಆದಿ ಉಡುಪಿಯ ಹೆಲಿಪ್ಯಾಡ್ ನಲ್ಲಿ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ನವರು ಕಾಲಕಾಲಕ್ಕೆ ವಿರೋಧ ಪಕ್ಷದ ನಾಯಕರಾಗಿ ವಾಗ್ದಾಳಿ ನಡೆಸುವುದು ಸಾಮಾನ್ಯವಾಗಿದೆ. ಆದರೆ ವಾದಗಳು ಆರ್ಭಟಗಳು ಸಮಸ್ಯೆಯನ್ನು ಪರಿಹಾರ ಮಾಡುವುದಿಲ್ಲ, ವಾಸ್ತವಿಕ ವಿಚಾರಗಳ ನೆಲೆಗಳನ್ನು ಇಟ್ಟುಕೊಂಡು ಉತ್ತಮ, ಸಮರ್ಥ ಆಡಳಿತ ನೀಡುವುದರ ಮೂಲಕ ಸಮಸ್ಯೆ ಪರಿಹಾರ ಮಾಡಬಹುದು. ಸಮಸ್ಯೆಯನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ಮುಖ್ಯ ಮಂತ್ರಿಯವರು ಅತ್ಯಂತ ಸಮರ್ಥ ಮುಖ್ಯ ಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಸಹಜವಾಗಿ ವಿರೋಧ ಪಕ್ಷದ ನಾಯಕರಾಗಿ ಸಿದ್ಧರಾಮಯ್ಯನವರು ಆರ್ಭಟಿಸುತ್ತಿದ್ದಾರೆ. ಅವರೆಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುತ್ತೇವೆ ಎಂದರು.

ಈ ವೇಳೆ ಮುಖ್ಯಮಂತ್ರಿಗಳಿಗೆ ಕಣ್ಣಿಲ್ಲ, ನಾಲಗೆ ಇಲ್ಲ ಎಂಬ ಸಿದ್ಧರಾಮಯ್ಯ ಅವರ ಟೀಕೆಗೆ ಸಿಎಂ ಅವರು ಯಾಕೆ ಮೌನವಾಗಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕಲವೊಂದು ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಬೇಕು ಎಂದೆನಿಸುವುದಿಲ್ಲ. ದೊಡ್ಡವರು ಆಡುವ ಸಣ್ಣ ಮಾತಿಗೆ ಉತ್ತರ ಇರುವುದಿಲ್ಲ. ಅದಕ್ಕಾಗಿ ಸಿದ್ದರಾಮಯ್ಯನವರು ನನ್ನ ದೃಷ್ಟಿಯಲ್ಲಿ ರಾಜಕಾರಣದಲ್ಲಿ ದೊಡ್ಡ ಮನುಷ್ಯ, ಮಾಜಿ ಮುಖ್ಯಮಂತ್ರಿಗಳಾಗಿದ್ದವರು. ಅವರು ಸಣ್ಣ ಮಾತುಗಳನ್ನು ಆಡಿದರೆ ಉತ್ತರ ಕೊಡಬೇಕು ಎಂದೆನಿಸುವುದಿಲ್ಲ . ಮುಖ್ಯಮಂತ್ರಿಯವರ ಮೌನವೇ ಅರ್ಥಗರ್ಬಿತ. ಕೆಲವು ಪ್ರಶ್ನೆಗಳಿಗೆ ನಿರುತ್ತರವೇ ಉತ್ತರ ಎಂದರು ಹಾಗೂ ಮುಖ್ಯ ಮಂತ್ರಿಯವರು ಸಮರ್ಥವಾದ ಆಡಳಿತ ನೀಡುತ್ತಿದ್ದಾರೆ. ರಾಜ್ಯದ ಜನತೆ ನೆಮ್ಮದಿಯಿಂದ ಇದ್ದಾರೆ ಎನ್ನುವ ವಿಶ್ವಾಸವಿದೆ ಎಂದರು.

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago