Featured

ಉಡುಪಿ: ವಾರಂಬಳ್ಳಿ ಗ್ರಾ ಪಂ. ಮಾಜಿ ಅಧ್ಯಕ್ಷರು ಸೇರಿದಂತೆ 12 ಮಂದಿ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ -Vishwanews24

ಉಡುಪಿ: ವಾರಂಬಳ್ಳಿ ಗ್ರಾ ಪಂ. ಮಾಜಿ ಅಧ್ಯಕ್ಷರು ಸೇರಿದಂತೆ 12 ಮಂದಿ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ -Vishwanews24

ಉಡುಪಿ: ವಾರಂಬಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಸೇರಿದಂತೆ ಹಲವಾರು ಮಂದಿ ಕಾಂಗ್ರೆಸ್ ಮುಖಂಡರು ಬುಧವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ವಾರಂಬಳ್ಳಿ ಗ್ರಾಮ ಪಂಚಾಯತ್ ನಲ್ಲಿ 2 ಬಾರಿ ಕಾಂಗ್ರೆಸ್ ನಿಂದ ಸದಸ್ಯರಾಗಿದ್ದು, ಅಧ್ಯಕ್ಷರಾಗಿದ್ದ ನಿತ್ಯಾನಂದ ಬಿ.ಆರ್., ವಾರಂಬಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಕಾಂಗ್ರೆಸ್ ಎಸ್.ಸಿ. ಮೋರ್ಚಾ ಅಧ್ಯಕ್ಷರಾದ ಎಸ್. ನಾರಾಯಣ್, ವಾರಂಬಳ್ಳಿ ಪಂಚಾಯತ್ ನಲ್ಲಿ ಕಾಂಗ್ರೆಸ್ ನಿಂದ 5 ಬಾರಿ ಸದಸ್ಯರಾಗಿ, ಪಂಚಾಯತ್ ಅಧ್ಯಕ್ಷರಾಗಿದ್ದ ನವೀನ್ ಚಂದ್ರ ನಾಯಕ್ ಸೇರಿದಂತೆ ವಾರಂಬಳ್ಳಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಮಾಜಿ ಸದಸ್ಯರುಗಳಾದ ರಾಜು ಸಾಲ್ಯಾನ್, ದೇವಾನಂದ, ಕ್ರಿಸ್ತೀನ್, ಗೋಪಾಲ ದೇವಾಡಿಗ, ಕವಿತಾ, ಹೇಮಾ ಶೆಟ್ಟಿಗಾರ್, ಸದಾನಂದ ಪೂಜಾರಿ, ಗುಲಾಬಿ ಕುಂದರ್ ಮತ್ತು ಸುರೇಶ್ ಬಿರ್ತಿ ಸೇರಿದಂತೆ ಒಟ್ಟು 12 ಮಂದಿ ಕಾಂಗ್ರೆಸ್ ಜನ ಪ್ರತಿನಿಧಿಗಳು ಉಡುಪಿ ಶಾಸಕ ಕೆ. ರಘುಪತಿ ಭಟ್ ರವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಹೊಸದಾಗಿ ಪಕ್ಷಕ್ಕೆ ಸೇರ್ಪಡೆಗೊಂಡವರಿಗೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ಬಿಜೆಪಿ ಪಕ್ಷದ ಬಾವುಟ ನೀಡುವ ಮೂಲಕ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಪ್ರಧಾನ ಕಾರ್ಯದರ್ಶಿಗಳಾದ ಅಶೋಕ್ ಹೇರೂರು, ವಾರಂಬಳ್ಳಿ ಗ್ರಾಮ ಪಂಚಾಯತ್ ಚುನಾವಣಾ ಉಸ್ತುವಾರಿಗಳಾದ ಸುಧೀರ್ ಶೆಟ್ಟಿ, ಪಕ್ಷದ ಮುಖಂಡರಾದ ನಿಶಾನ್ ರೈ, ಬಿರ್ತಿ ರಾಜೇಶ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ಕುಸುಮ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಉಮೇಶ್ ನಾಯ್ಕ್, ಜಿಲ್ಲಾ ಕಾರ್ಯಕಾರಣಿ ಸದಸ್ಯರಾದ ನಾಗವೇಣಿ, ಬ್ರಹ್ಮಾವರ ಮಹಾಶಕ್ತಿ ಕೇಂದ್ರದ ಸದಸ್ಯರಾದ ಉಲ್ಲಾಸ್ ವಾರಂಬಳ್ಳಿ ಮತ್ತು ಹರೀಶ್ ಶೆಟ್ಟಿ ಚೇರ್ಕಾಡಿ ಹಾಗೂ ಪಕ್ಷದ ಹಿರಿಯರು ಕಾರ್ಯಕರ್ತರು ಉಪಸ್ಥಿತರಿದ್ದರು.

 

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

4 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

10 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

12 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

12 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

12 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

12 hours ago