Categories: ಉಡುಪಿ

ಉಡುಪಿ: ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ 64.68 ಲಕ್ಷ ರೂ. ಮೌಲ್ಯದ ಉಚಿತ ಸಾಧನ ಸಲಕರಣೆ ವಿತರಣೆ – vishwanews24

ಉಡುಪಿ: ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ 64.68 ಲಕ್ಷ ರೂ. ಮೌಲ್ಯದ ಉಚಿತ ಸಾಧನ ಸಲಕರಣೆ ವಿತರಣೆ

ಉಡುಪಿ: ಜಿಲ್ಲಾಡಳಿತ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ಅಲಿಂಕೋ ಸಂಸ್ಥೆ ವತಿಯಿಂದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಇಂದು ಉಚಿತ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.

ಫಲಾನುಭವಿಗಳಿಗೆ ಸಲಕರಣೆ ವಿತರಿಸಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, 426 ವಿಕಲಚೇತನರಿಗೆ ಹಾಗೂ 273 ಹಿರಿಯ ನಾಗರಿಕರಿಗೆ ಒಟ್ಟು 64.68 ಲಕ್ಷ ರೂ. ಮೌಲ್ಯದ ಸಾಧನ ಸಲಕರಣೆಗಳನ್ನು ಇಂದು ವಿತರಿಸಲಾಯಿತು.

ಇದೊಂದು ಉತ್ತಮ ಕಾರ್ಯಕ್ರಮ. ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ನೀಡಲಾಗುವ ಅಗತ್ಯ ಸಲಕರಣೆಗಳ ಉತ್ಪಾದನ ಕೇಂದ್ರ ಹಾಗೂ ದುರಸ್ತಿ ಕೇಂದ್ರವನ್ನು ಉಡುಪಿ ಜಿಲ್ಲೆಯಲ್ಲಿ ಸ್ಥಾಪಿಸುವ ಬಗ್ಗೆ ಕೇಂದ್ರ ಸರಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ, ಈ ವರ್ಷ ಉಡುಪಿ ಜಿಲ್ಲೆಯಲ್ಲಿ ಸರ್ವೆ ನಡೆಸಿ 426 ವಿಕಲಚೇತನರಿಗೆ 41.68 ಲಕ್ಷ ರೂ. ಮೌಲ್ಯದ ಹಾಗೂ 273 ಹಿರಿಯ ನಾಗರಿಕರಿಗೆ 23 ಲಕ್ಷ ರೂ. ಮೌಲ್ಯದ ಸಲಕರಣೆಗಳನ್ನು ಇಂದು ವಿತರಿಸಲಾಗುತ್ತಿದೆ. ಈ ಸಲಕರಣೆಗಳನ್ನು ದುರಸ್ತಿ ಪಡಿಸಲು ಮಂಗಳೂರಿನಲ್ಲಿ ದುರಸ್ತಿ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯಲ್ಲೂ ದುರಸ್ತಿ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವ ಕಳುಹಿಸಲಾಗುವುದು. ಈ ನಿಟ್ಟಿನಲ್ಲಿ ಸಂಸದರು ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು.

ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರತ್ನ ಮುಖ್ಯ ಅತಿಥಿಗಳಾಗಿ‌ ಭಾಗವಹಿಸಿದ್ದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

20 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

20 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

20 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

23 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

23 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

23 hours ago