Featured

ಉಡುಪಿ:  ವಿಟ್ಲಪಿಂಡಿ ಉತ್ಸವ ವೇಳೆ ಶ್ರೀಗಳ ಕೈಯಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ – vishwanews24

ಉಡುಪಿ:  ವಿಟ್ಲಪಿಂಡಿ ಉತ್ಸವ ವೇಳೆ ಶ್ರೀಗಳ ಕೈಯಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ವೇಳೆ ಅನಿರೀಕ್ಷಿತ ಅವಘಡವೊಂದು ನಡೆದಿದೆ. ಚಿನ್ನದ ರಥದಲ್ಲಿ ರಥಾರೂಢವಾಗಿದ್ದ ಕೃಷ್ಣನ ಮಣ್ಣಿನ ಮೂರ್ತಿಯನ್ನು  ಉತ್ಸವದ ಬಳಿಕ ಇಳಿಸುವ ವೇಳೆ, ಪರ್ಯಾಯ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಗಳ ಕೈಯಿಂದ ಮೂರ್ತಿ ಜಾರಿ ಕೆಳಗೆ ಬಿದ್ದು ಭಗ್ನವಾಗಿದೆ. ಘಟನೆ ಕಂಡು ಸ್ಥಳದಲ್ಲಿದ್ದ ಭಕ್ತರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ವಿಟ್ಲಪಿಂಡಿ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ಚಾತುರ್ಮಾಸದ ಹಿನ್ನೆಲೆ ಪ್ರತಿಷ್ಠಾಪಿಸಲಾಗಿದ್ದ ಕೃಷ್ಣನ ಮಣ್ಣಿನ ಮೂರ್ತಿಯನ್ನು ಚಿನ್ನದ ರಥದಲ್ಲಿ ರಥಾರೂಢಗೊಳಿಸಿ, ರಥಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು.

ಉತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ರಥೋತ್ಸವದ ಬಳಿಕ ಕೃಷ್ಣನ ಮಣ್ಣಿನ ಮೂರ್ತಿಯನ್ನು ರಥದಿಂದ ಇಳಿಸಿ, ಮಧ್ವ ಸರೋವರದಲ್ಲಿ ವಿಸರ್ಜನೆಗೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಗಳ ಕೈಯಿಂದ ಕೃಷ್ಣನ ಮೂರ್ತಿ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದಿದೆ. ಕೆಳಗೆ ಬಿದ್ದ ರಭಸಕ್ಕೆ ಮಣ್ಣಿನಿಂದ ಮಾಡಲಾಗಿದ್ದ ಕೃಷ್ಣನ ಮೂರ್ತಿ ಭಗ್ನವಾಗಿದೆ.

ಮೂರ್ತಿ ಕೈಯಿಂದ ಜಾರಿ ಬಿದ್ದ ದೃಶ್ಯ ಕಂಡು ಸ್ಥಳದಲ್ಲಿದ್ದ ಭಕ್ತರಲ್ಲಿ ಕೆಲಕಾಲ ಆತಂಕ ಮೂಡಿತು. ಪ್ರತಿವರ್ಷದಂತೆ ಈ ಬಾರಿಯೂ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನಡೆದ ವಿಟ್ಲಪಿಂಡಿ ಉತ್ಸವದ ಅಂತಿಮ ಹಂತದಲ್ಲಿ ನಡೆದ ಈ ಅನಿರೀಕ್ಷಿತ ಘಟನೆ ಇದೀಗ ಗಮನ ಸೆಳೆದಿದೆ.

Vishwa News 24

Recent Posts

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು – vishwanews24

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ…

13 minutes ago

ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ – vishwanews24

ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ ಮಂಗಳೂರು: ಪ್ರವಾಸಿಗರಿಗೆ ಸ್ಥಳೀಯ ಜೀವನಶೈಲಿ ಮತ್ತು ಸಂಸ್ಕೃತಿಯ…

26 minutes ago

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ – vishwanews24

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ ಮಂಗಳೂರು: ರಾಜ್ಯದ ಕಾಂಗ್ರೆಸ್…

40 minutes ago

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ – vishwanews24

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು…

47 minutes ago

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ – vishwanews24

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹೆಸರಿನಲ್ಲಿ…

52 minutes ago

ಬೆಳ್ತಂಗಡಿ: ಸೆ. 7ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಮುಕ್ತ ; ಗಡಾಯಿಕಲ್ಲು ಚಾರಣಕ್ಕೆ ನಿಷೇಧ ಮುಂದುವರಿಕೆ – vishwanews24

ಬೆಳ್ತಂಗಡಿ: ಸೆ. 7ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಮುಕ್ತ: ಗಡಾಯಿಕಲ್ಲು ಚಾರಣಕ್ಕೆ ನಿಷೇಧ ಮುಂದುವರಿಕೆ ಬೆಳ್ತಂಗಡಿ: ಭಾರೀ ಮಳೆ ಹಿನ್ನೆಲೆಯಲ್ಲಿ…

59 minutes ago