Featured

‘ಉಡುಪಿ ವಿಡಿಯೋ ಪ್ರಕರಣ – ತನಿಖೆ ವರದಿ ಬಂದ ನಂತರ ಕ್ರಮ : ಸಿದ್ದರಾಮಯ್ಯ – Vishwanews24

ಮಂಗಳೂರು: ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ : ಸಿದ್ದರಾಮಯ್ಯ

ಮಂಗಳೂರು: ಉಡುಪಿ ಕಾಲೇಜೊಂದರಲ್ಲಿ ನಡೆದ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐ ಆರ್ ಆಗಿದೆ. ತನಿಖೆಯನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್‌‌ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಲಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಕ್ಕಳಾಟಿಕೆಯಾಗಿದಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ ಎಂದರು. ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು, ಎಫ್. ಐ.ಆರ್. ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು. ಡಿವೈಎಸ್ಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದ ಮೇಲೆ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದರು.

ಕರಾವಳಿ ಭಾಗಕ್ಕೆ ನೀಡಿರುವ ಸೌಲಭ್ಯಗಳನ್ನು ಬಜೆಟ್ ನಲ್ಲಿ ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ಉಡುಪಿ, ಮಂಗಳೂರು, ಕರಾವಳಿ ಪ್ರದೇಶದಲ್ಲಿ ಮಳೆಯಾಗಿದ್ದು, ಹಾನಿಯಾಗಿರುವ ಪ್ರದೇಶಗಳನ್ನು ವೀಕ್ಷಿಸಲು ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಲು ಆಗಮಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು. ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದರು. ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ , ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ವ್ಯಕ್ತಿ ಯ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಟೀಕೆ ಮಾಡಿದರೂ ಕ್ರಮ ಕೈಗೊಳ್ಳುತ್ತಿದ್ದೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಟೀಕೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ತೆಗೆದುಕೊಳ್ಳಲಾಗುವುದು ಎಂದರು. ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಬೇರೆ ಎಂದರು

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago