Featured

ಉಡುಪಿ ವಿಡಿಯೋ ವಿವಾದ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳ‌ ಪ್ರತಿಭಟನೆ – Vishwanews24

ಉಡುಪಿ ವಿಡಿಯೋ ವಿವಾದ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳ‌ ಪ್ರತಿಭಟನೆ

ಉಡುಪಿ: ನಗರದ  ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೀಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಹುತಾತ್ಮರ ಸ್ಮಾರಕದ ಬಳಿ ಎಬಿವಿಪಿ ಇಂದು ಪ್ರತಿಭಟನೆ ನಡೆಸಿದೆ.

ಪ್ರಕರಣದ ವಿಚಾರವಾಗಿ ಸೂಕ್ತ ತನಿಖೆ ನಡೆಯಬೇಕು. ಅಲ್ಲದೇ ಸಂತ್ರಸ್ತ ವಿದ್ಯಾರ್ಥಿನಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಈ ವೇಳೆ ಮಳೆಯನ್ನೂ ಲೆಕ್ಕಿಸದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಎಸ್‍ಪಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದಿದ್ದು. ಸ್ಥಳಕ್ಕೆ ಎಸ್‍ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಭೇಟಿ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‍ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಮಾತನಾಡಿ, ವೀಡಿಯೋ ವಿವಾದಕ್ಕೆ ತಳುಕು ಹಾಕಿ ಬೇರೆ ವೀಡಿಯೋಗಳನ್ನು ವೈರಲ್ ಮಾಡುತ್ತಿದ್ದಾರೆ. ಈ ಪ್ರಕರಣದ ವೀಡಿಯೋ ವೈರಲ್ ಆಗಿಲ್ಲ. ಮೊಬೈಲ್ ಸಂಪೂರ್ಣ ಪರಿಶೀಲನೆ ಮಾಡಲಾಗಿದ್ದು, ಯಾವ ವೀಡಿಯೋಗಳು ಸಹ ಪತ್ತೆಯಾಗಿಲ್ಲ. ಬೇರೆ ಮೊಬೈಲ್‍ಗಳಿದ್ದರೆ ಅವುಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗುವುದು. ಅಲ್ಲದೇ ಡಿಲೀಟ್ ಮಾಡಿದ್ದರೆ ಅವುಗಳನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಿ ತನಿಖೆ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇದಕ್ಕೆ ವಿದ್ಯಾರ್ಥಿ ಮುಖಂಡರು ಎಫ್‍ಐಆರ್ ದಾಖಲಾಗಲು ಇಷ್ಟು ವಿಳಂಬ ಏಕೆ? ಎಫ್‍ಐಆರ್ ದಾಖಲಾಗದೆ ಹೇಗೆ ಮೊಬೈಲ್ ಪರಿಶೀಲಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆರೋಪಿಗಳನ್ನು ಬಚಾವ್ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago