ಉಡುಪಿ: ನಗರದ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವೀಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಹುತಾತ್ಮರ ಸ್ಮಾರಕದ ಬಳಿ ಎಬಿವಿಪಿ ಇಂದು ಪ್ರತಿಭಟನೆ ನಡೆಸಿದೆ.
ಪ್ರಕರಣದ ವಿಚಾರವಾಗಿ ಸೂಕ್ತ ತನಿಖೆ ನಡೆಯಬೇಕು. ಅಲ್ಲದೇ ಸಂತ್ರಸ್ತ ವಿದ್ಯಾರ್ಥಿನಿಗೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಈ ವೇಳೆ ಮಳೆಯನ್ನೂ ಲೆಕ್ಕಿಸದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಎಸ್‍ಪಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಬೇಕು ಎಂದು ಪಟ್ಟು ಹಿಡಿದಿದ್ದು. ಸ್ಥಳಕ್ಕೆ ಎಸ್‍ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಭೇಟಿ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‍ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಮಾತನಾಡಿ, ವೀಡಿಯೋ ವಿವಾದಕ್ಕೆ ತಳುಕು ಹಾಕಿ ಬೇರೆ ವೀಡಿಯೋಗಳನ್ನು ವೈರಲ್ ಮಾಡುತ್ತಿದ್ದಾರೆ. ಈ ಪ್ರಕರಣದ ವೀಡಿಯೋ ವೈರಲ್ ಆಗಿಲ್ಲ. ಮೊಬೈಲ್ ಸಂಪೂರ್ಣ ಪರಿಶೀಲನೆ ಮಾಡಲಾಗಿದ್ದು, ಯಾವ ವೀಡಿಯೋಗಳು ಸಹ ಪತ್ತೆಯಾಗಿಲ್ಲ. ಬೇರೆ ಮೊಬೈಲ್‍ಗಳಿದ್ದರೆ ಅವುಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗುವುದು. ಅಲ್ಲದೇ ಡಿಲೀಟ್ ಮಾಡಿದ್ದರೆ ಅವುಗಳನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಿ ತನಿಖೆ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದಕ್ಕೆ ವಿದ್ಯಾರ್ಥಿ ಮುಖಂಡರು ಎಫ್‍ಐಆರ್ ದಾಖಲಾಗಲು ಇಷ್ಟು ವಿಳಂಬ ಏಕೆ? ಎಫ್‍ಐಆರ್ ದಾಖಲಾಗದೆ ಹೇಗೆ ಮೊಬೈಲ್ ಪರಿಶೀಲಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಆರೋಪಿಗಳನ್ನು ಬಚಾವ್ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…