ಉಡುಪಿ: ವಿದೇಶದಲ್ಲಿ ಕೆಲಸ ಕೊಡಿಸುವದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂಪಾಯಿ ಹಣ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಯುವತಿ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬಿಸಿಎ ಪದವೀಧರೆಯಾಗಿರುವ ಶಾಲಿನಿ ವಂಚನೆಗೊಳಗಾದ ಯುವತಿ. ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಕೋಲಾರ ಜಿಲ್ಲೆಯ ಮಾಲೂರು ನಿವಾಸಿ ನಿತೀನ್ ಕುಮಾರ್ ವಂಚಿಸಿದ ಯುವಕನಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದುಬೈ ಹಾಗೂ ಅಮೆರಿಕದ ಪ್ರಮುಖ ಕಂಪೆನಿಯಲ್ಲಿ ಒಳ್ಳೆಯ ಕೆಲಸ ಕೊಡಿಸುವುದಾಗಿ ನಂಬಿಸಿ ಶಾಲಿನಿಯವರ ಹೆಸರಿನಲ್ಲಿರುವ ಕುಂದಾಪುರ ಯೂನಿಯನ್ ಬ್ಯಾಂಕ್ ಖಾತೆಯಿಂದ 22,63,999ರೂ., ಕೋರಮಂಗಳ ಶಾಖೆಯ ಎಚ್‌ಡಿಎಫ್‌ಸಿ ಬ್ಯಾಂಕ್‌ನಿಂದ 5,85,000, ಶಾಲಿನಿ ಅವರ ತಂದೆ ಕೆ.ನರಸಿಂಹ ಪೂಜಾರಿ ಅವರ ಕುಂದಾಪುರದ ಎಸ್‌ಬಿಐ ಖಾತೆಯಿಂದ 5,16,302 ರೂ. ಸೇರಿದಂತೆ ಒಟ್ಟು 33,65,501 ರೂ.ನಗದು ಹಣವನ್ನು ತನ್ನ ಕೋರಮಂಗಲ ಶಾಖೆಯ ಎಚ್‌ಡಿಎಫ್‌ಸಿ ಬ್ಯಾಂಕ್ ಖಾತೆಗೆ ಮೊಬೈಲ್‌ನ ವಿವಿಧ ಆ್ಯಪ್ ಮೂಲಕ ವರ್ಗಾಯಿಸಿಕೊಂಡಿದ್ದು, ಪಿರ್ಯಾದಿದಾರರಿಗೆ ಕೆಲಸವನ್ನು ಕೊಡಿಸದೇ, ಹಣವನ್ನು ಹಿಂದಿರುಗಿಸದೇ ಆರೋಪಿ ನಿತೀಶ್ ಕುಮಾರ್ ನಂಬಿಕೆ ದ್ರೋಹ, ವಂಚನೆ ಹಾಗೂ ಮೋಸವನ್ನು ಎಸಗಿರುವುಗಾಗಿ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ತಿಳಿಸಲಾಗಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…