ಉಡುಪಿ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಜೆಡಿಎಸ್ ಮುಖಂಡ ಮುಕ್ತಾರ್ ಇಸ್ಲಾಯಿಲ್ ಕೋಟೇಶ್ವರ ಪ್ರಕರಣದ ಆರೋಪಿ.
ಈತ ತೆಂಕನಿಡಿಯೂರಿನ ಸತೀಶ, ಅಜಿತ್ ಹಾಗೂ ಮಣಿಪಾಲದ ಸಂಗಪ್ಪ ಎಂಬ ಮೂವರಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು
ವಂಚಿಸಿದ್ದಾನೆ ಎಂದು ಮೂವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು : ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ -Vishwanews24
ದೂರಿನ ಪ್ರಕಾರ ಮುಕ್ತಾರ್ ಒಂದು ವರ್ಷದ ಹಿಂದೆ ಸತೀಶ್, ಅಜಿತ್, ಸಂಗಪ್ಪ ಎಂಬ ಮೂವರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ,
ಮೂವರಿಂದಲೂ ತಲಾ 65,000 ರೂ ನಗದುಪಡೆದುಕೊಂಡಿದ್ದಾನೆ. ಆದರೆ ಈವರೆಗೂ ಉದ್ಯೋಗವು ಕೊಡಿಸದೆ, ಇತ್ತ ಹಣವನ್ನೂ ಹಿಂದಿರುಗಿಸದೆ
ವಂಚಿಸಿದ್ದಾನೆ. ಅಲ್ಲದೆ ಮುಕ್ತಾರ್ ತನ್ನ ಮೊಬೈಲ್ ಫೋನ್ ಕೂಡಾ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ.
ಈ ಕುರಿತಂತೆ ಈ ಮೂವರು ಮುಕ್ತಾರ ಮನೆಗೆ ಹೋದ ವೇಳೆ ಮನೆಯವರೇ ಈತನ ಬಗ್ಗೆ ಬೈದಿದ್ದು, ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿ ನಾವು
ನಿಮಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ ತಮ್ಮ ಹಣವನ್ನು ಹಿಂದಿರುಗಿಸಲು ಸಹಕಾರ ನೀಡುವಂತೆ
ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…