Featured

ಉಡುಪಿ: ವಿದೇಶದಿಂದ ಬಂದವರಿಗೆ ಕೋವಿಡ್ ಆರ್‌-ಟಿ-ಪಿಆರ್‌ ವರದಿ ನೆಗೆಟಿವ್ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ :  ಜಿಲ್ಲಾಧಿಕಾರಿ – Vishwanews24

ಉಡುಪಿ: ವಿದೇಶದಿಂದ ಬಂದವರಿಗೆ ಕೋವಿಡ್ ಆರ್‌-ಟಿ-ಪಿಆರ್‌ ವರದಿ ನೆಗೆಟಿವ್ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ :  ಜಿಲ್ಲಾಧಿಕಾರಿ – Vishwanews24

ಉಡುಪಿ : ವಿದೇಶದಿಂದ ಬಂದವರ ಕೋವಿಡ್ ಆರ್‌-ಟಿ-ಪಿಆರ್‌ ವರದಿ ನೆಗೆಟಿವ್ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚನೆ ನೀಡಿದ್ದಾರೆ.

ನ.20 ರ ಮಂಗಳವಾರ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ , ಕೊರೊನಾ ರೂಪಾಂತರಿ ‘ಒಮಿಕ್ರಾನ್’ ಆತಂಕದ ಹಿನ್ನಲೆಯಲ್ಲಿ ವಿದೇಶದಿಂದ ಬಂದವರು ಮೇಲೆ ನಿಗಾ ವಹಿಸಲಾಗಿದೆ. ಆರ್‌-ಟಿ-ಪಿಆರ್‌ ನೆಗೆಟಿವ್ ವರದಿ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ನಲ್ಲಿ ಇರಬೇಕು. ಇದರೊಂದಿಗೆ ಕೇರಳದಿಂದ ಬಂದವರಿಗೂ ನೆಗೆಟಿವ್ ರಿಪೋರ್ಟ್ ಕಡ್ದಾಯವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್ ಮುಗಿಸಿ ಮತ್ತೆ ಟೆಸ್ಟಿಂಗ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಎಲ್ಲಾ ಸಮುದಾಯದ ಮುಖಂಡರು, ಸಂಘ ಸಂಘಟನೆಗಳ ಸಭೆ ಮಾಡಿದ್ದೇವೆ.ಮಾರ್ಗಸೂಚಿ ಪಾಲನೆ ಹಾಗೂ ವ್ಯಾಕ್ಸಿನೇಶನ್ ಬಗ್ಗೆ ಸಹಕಾರ ಕೇಳಿದ್ದೇವೆ. ಮೊದಲ ಡೋಸ್ ಪಡೆಯದವರ ಪತ್ತೆ ಕಾರ್ಯ ನಡೆಯುತ್ತಿದೆ. ಲಸಿಕೆ ಪಡೆಯಲು ನಿರಾಸಕ್ತಿ ತೋರುವವರನ್ನು ಸಂಬಂಧಪಟ್ಟ ಸಮುದಾಯಗಳ ಮುಖಂಡರು ಮನವೊಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇನ್ನು ಕಾಲೇಜು- ಹಾಸ್ಟೆಲ್ ಗಳ ಮೇಲೆ ಹೆಚ್ವಿನ ನಿಗಾ ವಹಿಸಲಾಗಿದೆ. ಮಣಿಪಾಲ ವಿವಿ ಜೊತೆ ಮಾತುಕತೆ ಮಾಡಿದ್ದೇವೆ. ಈ ಯೂನಿವರ್ಸಿಟಿ ಗೆ ಹೊರ ರಾಜ್ಯ ಹೊರ ದೇಶದಿಂದ ಹೆಚ್ಚಿನ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಹೀಗಾಗಿವಿದ್ಯಾರ್ಥಿಗಳಿಗೆ ಸಂಪೂರ್ಣ ತಪಾಸಣೆ ಮಾಡುವಂತೆ ಸೂಚಿಸಲಾಗಿದೆ. ಕೋವಿಡ್ ಮಾರ್ಗಸೂಚಿ ಕಡ್ಡಾಯ ಮಾಡಲಾಗಿದೆ.ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಮಣಿಪಾಲ ವಿವಿ ಮುಖ್ಯಸ್ಥರು ಹೇಳಿದ್ದಾರೆ ಎಂದು ಡಿಸಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

24 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

24 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

24 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

1 day ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago