ಉಡುಪಿ : ವಿದೇಶದಿಂದ ಬಂದವರ ಕೋವಿಡ್ ಆರ್-ಟಿ-ಪಿಆರ್ ವರದಿ ನೆಗೆಟಿವ್ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸೂಚನೆ ನೀಡಿದ್ದಾರೆ.
ನ.20 ರ ಮಂಗಳವಾರ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ , ಕೊರೊನಾ ರೂಪಾಂತರಿ ‘ಒಮಿಕ್ರಾನ್’ ಆತಂಕದ ಹಿನ್ನಲೆಯಲ್ಲಿ ವಿದೇಶದಿಂದ ಬಂದವರು ಮೇಲೆ ನಿಗಾ ವಹಿಸಲಾಗಿದೆ. ಆರ್-ಟಿ-ಪಿಆರ್ ನೆಗೆಟಿವ್ ವರದಿ ಇದ್ದರೂ ಒಂದು ವಾರ ಕಡ್ಡಾಯ ಕ್ವಾರಂಟೈನ್ ನಲ್ಲಿ ಇರಬೇಕು. ಇದರೊಂದಿಗೆ ಕೇರಳದಿಂದ ಬಂದವರಿಗೂ ನೆಗೆಟಿವ್ ರಿಪೋರ್ಟ್ ಕಡ್ದಾಯವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್ ಮುಗಿಸಿ ಮತ್ತೆ ಟೆಸ್ಟಿಂಗ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಎಲ್ಲಾ ಸಮುದಾಯದ ಮುಖಂಡರು, ಸಂಘ ಸಂಘಟನೆಗಳ ಸಭೆ ಮಾಡಿದ್ದೇವೆ.ಮಾರ್ಗಸೂಚಿ ಪಾಲನೆ ಹಾಗೂ ವ್ಯಾಕ್ಸಿನೇಶನ್ ಬಗ್ಗೆ ಸಹಕಾರ ಕೇಳಿದ್ದೇವೆ. ಮೊದಲ ಡೋಸ್ ಪಡೆಯದವರ ಪತ್ತೆ ಕಾರ್ಯ ನಡೆಯುತ್ತಿದೆ. ಲಸಿಕೆ ಪಡೆಯಲು ನಿರಾಸಕ್ತಿ ತೋರುವವರನ್ನು ಸಂಬಂಧಪಟ್ಟ ಸಮುದಾಯಗಳ ಮುಖಂಡರು ಮನವೊಲಿಸಬೇಕಾಗಿದೆ ಎಂದು ಹೇಳಿದ್ದಾರೆ.
ಇನ್ನು ಕಾಲೇಜು- ಹಾಸ್ಟೆಲ್ ಗಳ ಮೇಲೆ ಹೆಚ್ವಿನ ನಿಗಾ ವಹಿಸಲಾಗಿದೆ. ಮಣಿಪಾಲ ವಿವಿ ಜೊತೆ ಮಾತುಕತೆ ಮಾಡಿದ್ದೇವೆ. ಈ ಯೂನಿವರ್ಸಿಟಿ ಗೆ ಹೊರ ರಾಜ್ಯ ಹೊರ ದೇಶದಿಂದ ಹೆಚ್ಚಿನ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಹೀಗಾಗಿವಿದ್ಯಾರ್ಥಿಗಳಿಗೆ ಸಂಪೂರ್ಣ ತಪಾಸಣೆ ಮಾಡುವಂತೆ ಸೂಚಿಸಲಾಗಿದೆ. ಕೋವಿಡ್ ಮಾರ್ಗಸೂಚಿ ಕಡ್ಡಾಯ ಮಾಡಲಾಗಿದೆ.ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಮಣಿಪಾಲ ವಿವಿ ಮುಖ್ಯಸ್ಥರು ಹೇಳಿದ್ದಾರೆ ಎಂದು ಡಿಸಿ ತಿಳಿಸಿದ್ದಾರೆ.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…