Featured

ಉಡುಪಿ  : ವಿದೇಶಿ ಕರೆನ್ಸಿ ವಿನಿಮಯ ನೆಪದಲ್ಲಿ ಹಲವು ವ್ಯಕ್ತಿಗಳಿಗೆ ವಂಚನೆ – 6 ಮಂದಿ ಅಂತರರಾಜ್ಯ ಖದೀಮರು ಅರೆಸ್ಟ್ – Vishwanews24

ಉಡುಪಿ  : ವಿದೇಶಿ ಕರೆನ್ಸಿ ವಿನಿಮಯ ನೆಪದಲ್ಲಿ ಹಲವು ವ್ಯಕ್ತಿಗಳಿಗೆ ವಂಚನೆ – 6 ಮಂದಿ ಅಂತರರಾಜ್ಯ ಖದೀಮರು ಅರೆಸ್ಟ್

ಉಡುಪಿ : ವಿದೇಶಿ ಕರೆನ್ಸಿ ವಿನಿಮಯದ ನೆಪದಲ್ಲಿ ಹಲವು ವ್ಯಕ್ತಿಗಳಿಗೆ ವಂಚನೆ ಮಾಡಿದ ಅಂತರರಾಜ್ಯ ಖದೀಮರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಲದ, ಉತ್ತರ ಪ್ರದೇಶದಲ್ಲಿ ನೆಲಿಸಿದ್ದ ಮೊಹಮ್ಮದ್ ಪೋಲಾಶ್ ಖಾನ್ (42), ಮುಂಬೈ ಮೂಲದ, ಮಹಮ್ಮದ್ ಮಹತಾಬ್ ಬಿಲ್ಲಾಲ್ ಶೇಕ್ (43), ಪಶ್ಚಿಮ ಬಂಗಾಳದ ಮಹಮ್ಮದ್ ಫಿರೋಜ್ (30), ದೆಹಲಿಯಲ್ಲಿ ವಾಸವಾಗಿರುವ ನೂರ್ ಮಹಮ್ಮದ್ (36) ಹರಿಯಾಣದ ಮೀರಜ್ ಮತ್ತು ದೆಹಲಿ ಮೂಲದ ಮೊಹಮ್ಮದ್ ಜಹಾಂಗೀರಾ (60) ಎಂದು ಗುರುತಿಸಲಾಗಿದೆ.

ಆರೋಪಿಗಳು ಕರೆನ್ಸಿ ವಿನಿಮಯದಲ್ಲಿ ಕಡಿಮೆ ಬೆಲೆಗೆ ಯುಎಇ ದಿರ್ಹಾಮ್ ನೀಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಗಳ ವಿರುದ್ಧ ಬ್ರಹ್ಮಾವರ ಮತ್ತು ಕೋಟ ಪೊಲೀಸ್ ಠಾಣೆಗಳಲ್ಲಿ ವಂಚನೆಗೆ ಒಳಗಾದವರು ದೂರು ದಾಖಲಿಸಿದ್ದರು. ಈ ಪ್ರಕರಣವನ್ನು ಭೇದಿಸಲು ಉಡುಪಿ ಎಸ್ಪಿ ಅಕ್ಷಯ ಎಂ.ಹೆಚ್ ವಿಶೇಷ ತಂಡ ರಚಿಸಿದ್ದರು.

ಆರೋಪಿಗಳು ಕಡಿಮೆ ದರದಲ್ಲಿ ಭಾರತೀಯ ಕರೆನ್ಸಿಗೆ ಬದಲಾಗಿ ಯುಎಇ ದಿರ್ಹಾಮ್‌ಗಳನ್ನು ನೀಡುವ ಮೂಲಕ ಸಂತ್ರಸ್ತರನ್ನು ಮೊದಲು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರೆ. ನಂತರ, ಸಂತ್ರಸ್ತರಿಗೆ ತಮ್ಮ ಬಳಿ ಹೆಚ್ಚು ವಿದೇಶಿ ಕರೆನ್ಸಿ ಇದೆ ಎಂದು ಮನದಟ್ಟು ಮಾಡುತ್ತಿದ್ದರು. ನಂತರ, ಆರೋಪಿಗಳು ಹಣ ಬದಲಾಯಿಸಿಕೊಳ್ಳಲು, ಸ್ಥಳ ನಿಗದಿ ಮಾಡುತ್ತಿದ್ದರು. ಹಣ ಬದಲಾಯಿಸಿಕೊಳ್ಳಲು ಸ್ಥಳಕ್ಕೆ ಬಂದ ಸಂತ್ರಸ್ತರಿಗೆ ದಿರಾಹಮ್‌ಗಳ ಬದಲಿಗೆ ಬಟ್ಟೆಯಲ್ಲಿ ಸುತ್ತಿದ ಸಾಬೂನಿನ ಪ್ಯಾಕೆಟ್​​ನ್ನು ನೀಡುತ್ತಿದ್ದರು. ಸಂತ್ರಸ್ತರು ಆರೋಪಿ ನೀಡಿದ ವಿದೇಶಿ ಕರೆನ್ಸಿ ನೋಟುಗಳಿರುವ ಬ್ಯಾಗ್​​ನ್ನು ಪರಿಶೀಲಿಸುವ ಮೊದಲೇ ಆರೋಪಿಗಳು ಹಣವನ್ನು ಕಸಿದುಕೊಂಡು ಸ್ಥಳದಿಂದ ಪರಾರಿಯಾಗುತ್ತಿದ್ದರು ಎಂದು ಎಸ್​ಪಿ ಎಸ್ಪಿ ಅಕ್ಷಯ ಎಂ.ಹೆಚ್ ಹೇಳಿದ್ದಾರೆ.

ಆರೋಪಿಗಳ ವಿರುದ್ಧ ದೆಹಲಿ ಮತ್ತು ದಾವಣಗೆರೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಸನ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇದೇ ರೀತಿಯ ಅಪರಾಧ ಎಸಗಿದ್ದಾರೆ ಎಂದು ಎಸ್ಪಿ ಅಕ್ಷಯ್ ಹೇಳಿದ್ದಾರೆ. ಆರೋಪಿಗಳನ್ನು ಮಾರ್ಚ್ 31 ರಂದು ಬಂಧಿಸಲಾಯಿತು ಮತ್ತು ಅವರನ್ನು ಕಸ್ಟಡಿಗೆ ಪಡೆದ ನಂತರ ಪೊಲೀಸರು 100 ದಿರ್ಹಮ್ ಮೌಲ್ಯದ 32 ವಿದೇಶಿ ಕರೆನ್ಸಿ ನೋಟುಗಳು, 19 ಮೊಬೈಲ್ ಫೋನ್‌ಗಳು, 6.29 ಲಕ್ಷ ರೂ. ಹಣ, ಮೂರು ಮೋಟಾರ್‌ಸೈಕಲ್‌ಗಳು ಮತ್ತು 30 ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago