ಉಡುಪಿ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟಿ.ಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ಮಾರುಥಿ ವೀಥಿಕಾದಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಮೃತಚಾಲಕನನ್ನು ಕಾರ್ಕಳ ನೀರೆ ಬೈಲೂರಿನ ಮೊಯ್ದಿನ್ ಬಾವ (65ವ) ಎಂದು ಗುರುತಿಸಲಾಗಿದೆ.
ಟಿಟಿ ವಾಹನದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಮೊಯ್ದಿನ್ ಅವರಿಗೆ ಏಕಾಏಕಿಯಾಗಿ ಎದೆ ನೋವು ಕಾಣಿಸಿಕೊಂಡಿದೆ. ಮಾರುಥಿ ವೀಥಿಕಾದಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರನ್ನು ಕಂಡು ವಾಹನ ನಿಲ್ಲಿಸಿ ಎದೆನೋವಿನ ವಿಚಾರವನ್ನು ಒಳಕಾಡುವರಲ್ಲಿ ಹೇಳಿಕೊಂಡಿದ್ದಾನೆ. ತಕ್ಷಣ ಒಳಕಾಡುವರು ಅಂಬುಲೆನ್ಸ್ ವಾಹನದಲ್ಲಿ ಚಾಲಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಆದರೆ ಪರೀಕ್ಷಿಸಿದ ವೈದ್ಯರು ಚಾಲಕ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಒಳಕಾಡು ಅವರು ತುರ್ತು ಸಂದರ್ಭದಲ್ಲಿ ಚಾಲಕನಿಗೆ ಕಂಡಿದ್ದರಿಂದ ಸಂಭವನೀಯ ದುರಂತವೊಂದು ತಪ್ಪಿದಂತಾಗಿದೆ.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…