Featured

ಉಡುಪಿ:  ವಿದ್ಯಾರ್ಥಿಗಳಿಗೆ MDMA ಮಾರಾಟ: ಇಬ್ಬರ ಬಂಧನ – vishwanews24

ಉಡುಪಿ:  ವಿದ್ಯಾರ್ಥಿಗಳಿಗೆ MDMA ಮಾರಾಟ: ಇಬ್ಬರ ಬಂಧನ

ಉಡುಪಿ: ವಿದ್ಯಾರ್ಥಿಗಳಿಗೆ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಣಿಪಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಟಪಾಡಿಯ ಅಕ್ಕರ್ ಮಹಮ್ಮದ್ ಬ್ಯಾರಿ (44) ಹಾಗೂ ಬೆಂಗಳೂರಿನ ಸೈಯದ್ ಸುಹೇಲ್ (26) ಎಂದು ಗುರುತಿಸಲಾಗಿದೆ.

ಪೆರಂಪಳ್ಳಿ ಬ್ರಿಡ್ಜ್ ಬಳಿ ಕಾರಿನಲ್ಲಿ MDMA ಇಟ್ಟುಕೊಂಡು ಬೆಂಗಳೂರಿನಿಂದ ತಂದು ಉಡುಪಿ, ಪೆರಂಪಳ್ಳಿ ಹಾಗೂ ಮಣಿಪಾಲ ಭಾಗಗಳಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸೆ.17ರ ಮಧ್ಯರಾತ್ರಿ 12.10ರ ಸುಮಾರಿಗೆ ಕಾರ್ಯಾಚರಣೆ ನಡೆಸಿ KA19-MK-2021 ನೋಂದಣಿ ಸಂಖ್ಯೆಯ ಮಾರುತಿ ಸ್ವಿಫ್ಟ್ ಕಾರನ್ನು ತಡೆದು ಆರೋಪಿಗಳನ್ನು ಬಂಧಿಸಲಾಯಿತು.

ಆರೋಪಿಗಳಿಂದ ಸುಮಾರು ‍1 ಲಕ್ಷ ಮೌಲ್ಯದ 30 ಗ್ರಾಂ MDMA, ₹40 ಸಾವಿರ ಮೌಲ್ಯದ ನಾಲ್ಕು ಮೊಬೈಲ್‌ಗಳು, ₹5 ಸಾವಿರ ಮೌಲ್ಯದ ಡಾಂಗಲ್, ₹9,500 ನಗದು ಹಾಗೂ 3 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ), 22(ಸಿ) ಅಡಿ ಪುಕರಣ ದಾಖಲಾಗಿದ್ದು, ಪಿಎಸ್‌ಐ ತಿಮ್ಮೇಶ್ ಬಿ.ಎನ್. ತನಿಖೆ ಕೈಗೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ ಪೊಲೀಸ್‌ ನಿರೀಕ್ಷಕ ಮಹೇಶ್ ಪುಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಸಿಬ್ಬಂದಿಗಳಾದ ಪವೀಣ್ ಕುಮಾರ್, ಪ್ರವೀಣ್ ಶೆಟ್ಟಿಗಾರ್, ರಾಜೇಶ್ ಹೆರ್ಗ, ವಿಶ್ವಜಿತ್, ಸುಕುಮಾರ್ ಶೆಟ್ಟಿ, ವಿದ್ಯಾ ನಾಯಕ್, ದೀಕ್ಷಿತ್, ಉಮೇಶ್, ಲಕ್ಷ್ಮೀಶ ಹಾಗೂ ಸಲೀಂ ಪಾಲ್ಗೊಂಡಿದ್ದರು.

Vishwa News 24

Recent Posts

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಪ್ರಿಯಾಂಕ್ ಖರ್ಗೆ – vishwanews24

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಪರಿಹಾರಕ್ಕೆ ಸರ್ಕಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು…

4 minutes ago

ಉಡುಪಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರದ ಚಿಂತನೆ : ಡಿಸಿಎಂ ಡಾ.ಜಿ.ಪರಮೇಶ್ವರ್ – vishwanews24

ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ : ಡಿಸಿಎಂ ಡಾ.ಜಿ.ಪರಮೇಶ್ವರ್ ಉಡುಪಿ : ಉಡುಪಿ ಜಿಲ್ಲೆಯ…

11 minutes ago

ಕರಾವಳಿಯ ವಾತಾವರಣ ಕೆಡಿಸಲು ಹಾಗೂ ವೋಟ್ ಬ್ಯಾಂಕ್‌ಗಾಗಿ ಕ್ಯಾಬಿನಟ್‌ ಸಭೆ : ಯತ್ನಾಳ್ ಲೇವಡಿ  – vishwanews24

ಕರಾವಳಿಯ ವಾತಾವರಣ ಕೆಡಿಸಲು ಹಾಗೂ ವೋಟ್ ಬ್ಯಾಂಕ್‌ಗಾಗಿ ಕ್ಯಾಬಿನಟ್‌ ಸಭೆ : ಯತ್ನಾಳ್ ಲೇವಡಿ  ಉಡುಪಿ: ಕರಾವಳಿಯಲ್ಲಿ ನಡೆಯಲಿರುವ ಸಚಿವ…

48 minutes ago

ಮಂಗಳೂರಿನ ಜನರ ಉಜ್ವಲ ಭವಿಷ್ಯಕ್ಕಾಗಿ ಹಲವು ಐತಿಹಾಸಿಕ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ : ಸಚಿವ ಯು.ಟಿ.ಖಾದರ್ – vishwanews24

‘ನವ ಮಂಗಳೂರು’ ನಿರ್ಮಾಣ, ಕರಾವಳಿಯ ಸರ್ವಾಂಗೀಣ ಪ್ರಗತಿಗೆ ರಾಜ್ಯ ಸರಕಾರ ಬದ್ಧ : ಸಚಿವ ಯು.ಟಿ.ಖಾದರ್ ಮಂಗಳೂರು : ಮಂಗಳೂರಿನ…

1 hour ago

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು – vishwanews24

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು ಬೆಳ್ತಂಗಡಿ : ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ…

2 hours ago

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ – vishwanews24

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಂಗಳೂರು :ನಗರದಲ್ಲಿ ಕ್ಯಾಬಿನೇಟ್ ಸಭೆ…

2 hours ago